Deepfake ಸದ್ಯ ಭಾರತೀಯ ವ್ಯವಸ್ಥೆಯ ಅತ್ಯಂತ ದೊಡ್ಡ ಬೆದರಿಕೆ: ಪ್ರಧಾನಿ ಮೋದಿ
Team Udayavani, Nov 17, 2023, 3:28 PM IST
ಹೊಸದಿಲ್ಲಿ: ಡೀಪ್ ಫೇಕ್ ಗಳು ಪ್ರಸ್ತುತ ಭಾರತೀಯ ವ್ಯವಸ್ಥೆಯು ಎದುರಿಸುತ್ತಿರುವ ದೊಡ್ಡ ಬೆದರಿಕೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಇದು ಸಮಾಜದಲ್ಲಿ ಅವ್ಯವಸ್ಥೆಯನ್ನು ಉಂಟುಮಾಡಬಹುದು. ಹೆಚ್ಚುತ್ತಿರುವ ಸಮಸ್ಯೆಯ ಬಗ್ಗೆ ಜನರಿಗೆ ಶಿಕ್ಷಣ ನೀಡಬೇಕು ಎಂದು ಪ್ರಧಾನಿ ಮಾಧ್ಯಮಗಳಿಗೆ ಒತ್ತಾಯಿಸಿದರು.
ದೆಹಲಿಯ ಬಿಜೆಪಿಯ ಪ್ರಧಾನ ಕಛೇರಿಯಲ್ಲಿ ಬಿಜೆಪಿಯ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಡೀಪ್ ಫೇಕ್ ಗಳಿಗಾಗಿ ಕೃತಕ ಬುದ್ಧಿಮತ್ತೆಯನ್ನು ದುರುಪಯೋಗಪಡಿಸಿಕೊಳ್ಳುವಾಗ ನಾಗರಿಕರು ಮತ್ತು ಮಾಧ್ಯಮಗಳು ಬಹಳ ಜಾಗರೂಕರಾಗಿರಬೇಕು ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಗರ್ಬಾ ನೃತ್ಯವಾಡುವ ವಿಡಿಯೋವೊಂದು ವೈರಲ್ ಆಗದೆ. ವೈರಲ್ ವಿಡಿಯೋದಲ್ಲಿ, ಪ್ರಧಾನಿಯನ್ನು ಹೋಲುವ ವ್ಯಕ್ತಿ ಕೆಲವು ಮಹಿಳೆಯರೊಂದಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಮೋದಿಯವರಂತೆ ಕಾಣುವ ವಿಕಾಸ್ ಮಹಂತೆ ಎಂಬ ನಟ ಎಂದು ಪತ್ತೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅವರು ಚಿಕ್ಕಂದಿನಿಂದಲೂ ಗರ್ಬಾ ಆಡಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.