ಜೆ.ಎನ್.ಯು.ಗೆ ನಟಿ ದೀಪಿಕಾ ಭೇಟಿ ; ಪಡುಕೋಣೆ ಚಿತ್ರಗಳನ್ನು ಬಹಿಷ್ಕರಿಸಿ ಎಂದ ಬಿಜೆಪಿ ನಾಯಕ
Team Udayavani, Jan 7, 2020, 10:52 PM IST
ನವದೆಹಲಿ: ಜವಹರಲಾಲ್ ವಿಶ್ವವಿದ್ಯಾನಿಲಯದ ಕ್ಯಾಂಪಸ್ ನೊಳಗಿದ್ದ ವಿದ್ಯಾರ್ಥಿನಿಲಯಗಳ ಒಳಗೆ ನುಗ್ಗಿ ವಿದ್ಯಾರ್ಥಿಗಳಿಗೆ ಥಳಿಸಿ ಗೂಂಡಾಪ್ರವೃತ್ತಿ ನಡೆಸಿದ ಘಟನೆಯನ್ನು ಖಂಡಿಸಿ ಜೆ.ಎನ್.ಯು. ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಭೇಟಿ ನೀಡಿದ್ದಾರೆ. ಮತ್ತು ಆ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಬಾಲಿವುಡ್ ನಟಿ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.
ಮಂಗಳವಾರ ರಾತ್ರಿ 7.45ರ ಸುಮಾರಿಗೆ ಕ್ಯಾಂಪಸ್ ಗೆ ಆಗಮಿಸಿದ ನಟಿ ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲಿದ್ದು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಬೆಂಬಲವನ್ನು ಸೂಚಿಸಿದರು ಮತ್ತು ಅವರಿಗೆ ಧೈರ್ಯ ತುಂಬಿದರು. ದೀಪಿಕಾ ಜೆ.ಎನ್.ಯು.ಗೆ ಭೇಟಿ ನೀಡಿದ ವಿಷಯ ತಿಳಿಯುತ್ತಿದ್ದಂತೆ ಆಕೆಯ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದೀಪಿಕಾ ಅವರು ಜೆ.ಎನ್.ಯು.ಗೆ ಭೇಟಿ ನೀಡಿದ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕ ತಾಜಿಂದರ್ ಪಾಲ್ ಸಿಂಗ್ ಬಗ್ಗ ಅವರು ನಟಿಯ ಚಿತ್ರಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ. ‘ತುಕ್ಡೇ ಗ್ಯಾಂಗ್ ಮತ್ತು ಅಫ್ಜಲ್ ಗ್ಯಾಂಗ್ ಗೆ ಬೆಂಬಲ ಸೂಚಿಸಿರುವ ದೀಪಿಕಾ ಪಡುಕೋಣೆ ಅವರ ಚಿತ್ರಗಳನ್ನು ಬಹಿಷ್ಕರಿಸುವುದೇ ಆಕೆಗೆ ನಾವು ಕಲಿಸಬಹುದಾದ ಸರಿಯಾದ ಪಾಠ’ ಎಂದು ತಾಜಿಂದರ್ ಅವರು ಹೇಳಿದ್ದಾರೆ.
Deepika Padukone at JNU. Near Sabarmati Hostel which was attacked on Sunday #JNUAttack pic.twitter.com/Wbem55bJgD
— Zeba Warsi (@Zebaism) January 7, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.