
ನೌಕಾಪಡೆಗೆ ಬ್ರಹ್ಮೋಸ್ ಬಲ
Team Udayavani, Dec 2, 2018, 6:00 AM IST

ಹೊಸದಿಲ್ಲಿ: ದೇಶದ ಸೇನಾ ಪಡೆಗೆ ಇನ್ನಷ್ಟು ಬಲ ನೀಡುವ ಬೆಳವಣಿಗೆಯಾಗಿ ರಕ್ಷಣಾ ಸಚಿವಾಲಯವು 3 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಒಪ್ಪಿಗೆ ನೀಡಿದೆ. ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ಷಿಪಣಿ ಹಾಗೂ ಶಸ್ತ್ರ ಸಜ್ಜಿತ ರಕ್ಷಣಾ ವಾಹನವನ್ನೂ ಈ ಮೊತ್ತದಲ್ಲಿ ಖರೀದಿಸಲಾಗುತ್ತದೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವ ದಲ್ಲಿ ನಡೆದ ರಕ್ಷಣಾ ಖರೀದಿ ಸಮಿತಿ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
7 ಸಾವಿರ ಕೋಟಿ ರೂ. ವೆಚ್ಚದಲ್ಲಿ ಎರಡು ಸಮರ ನೌಕೆಗಳ ಖರೀದಿ ಪ್ರಕ್ರಿಯೆ ಮುಗಿದಿದ್ದು, ರಷ್ಯಾದ ಯಾಂತಾರ್ ಶಿಪ್‌ಯಾರ್ಡ್‌ನಲ್ಲಿ ತಯಾರಿಸಲಾಗುತ್ತದೆ. ಈ ಹಡಗುಗಳಿಗೆ ಬ್ರಹ್ಮೋಸ್ ಕ್ಷಿಪಣಿ ಅಳವಡಿಸ ಲಾಗುತ್ತದೆ. ಇವು ದೇಶೀಯವಾಗಿ ಅಭಿವೃದ್ಧಿ ಪಡಿಸಲಾದ ಅತ್ಯಾಧುನಿಕ ಸೂಪರ್‌ಸಾನಿಕ್ ಕ್ಷಿಪಣಿಗಳಾಗಿವೆ. ಈ ಹಡಗುಗಳಲ್ಲಿ ಪ್ರಾಥಮಿಕ ಶಸ್ತ್ರಾಸ್ತ್ರವೇ ಬ್ರಹ್ಮೋಸ್ ಕ್ಷಿಪಣಿಗಳು ಆಗಿರಲಿವೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ಭಾರತೀಯ ಸೇನೆಯ ಮುಖ್ಯ ಯುದ್ಧ ತೋಪು ಅರ್ಜುನ್‌ಗಾಗಿ ಸಶಸ್ತ್ರ ರಕ್ಷಣಾ ವಾಹನಗಳನ್ನು ಖರೀದಿಸಲಾಗುತ್ತಿದೆ. ಇದನ್ನು ಡಿಆರ್‌ಡಿಒ ವಿನ್ಯಾಸಗೊಳಿಸಿದ್ದು, ಸರಕಾರಿ ಸ್ವಾಮ್ಯದ ಬಿಇಎಂಎಲ್ ಉತ್ಪಾದನೆ ಮಾಡುತ್ತಿದೆ.
ಏನಿದರ ವಿಶೇಷ?
3 ಮ್ಯಾಕ್ ಅಥವಾ 3,500 ಕಿ.ಮೀ. ವೇಗದಲ್ಲಿ ಸಾಗುವ ಸಾಮರ್ಥ್ಯ
ನೆಲ, ಜಲ, ಹಡಗು, ಆಕಾಶ ದಿಂದಲೂ ಹಾರಿಸಬಹುದಾದ ಅವಕಾಶ
“ಫೈರ್ ಆ್ಯಂಡ್ ಫಾರ್ಗೆಟ್’ ತತ್ವದಡಿ ಕಾರ್ಯಾಚರಣೆ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.