ದೆಹಲಿ ಅಸೆಂಬ್ಲಿಯಲ್ಲಿ ಪೇಪರ್ ಮಿಸೈಲ್ ತೂರಿದವರಿಗೆ ಥಳಿತ
Team Udayavani, Jun 29, 2017, 3:45 AM IST
ನವದೆಹಲಿ: ದೆಹಲಿ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ರತ್ತ ಪೇಪರ್ ಮಿಸೈಲ್ ಅನ್ನು ತೂರಿ ಬಿಟ್ಟ ಇಬ್ಬರು ವ್ಯಕ್ತಿಗಳನ್ನು ಆಪ್ ಶಾಸರು ಥಳಿಸಿದ್ದಾರೆ. ಇದರಿಂದಾಗಿ ಕೆಲ ಕಾಲ ಗೊಂದಲದ ವಾತಾವರಣ ಉಂಟಾಯಿತು. ಸದನದಲ್ಲಿ ಕಲಾಪ ನಡೆಯುತ್ತಿದ್ದಂತೆ ವೀಕ್ಷಕರ ಗ್ಯಾಲರಿಯಲ್ಲಿ ಮುಂಡಾಸು ಧರಿಸಿದ ಇಬ್ಬರು ವ್ಯಕ್ತಿಗಳು ಕಾಗದದಿಂದ ತಯಾರಿಸಿದ ಮಿಸೈಲ್ ಅನ್ನು ಮುಖ್ಯಮಂತ್ರಿಯತ್ತ ಹಾರಿಬಿಟ್ಟರು. ಇದರ ಜತೆಗೆ ಇಂಕಿಲಾಬ್ ಜಿಂದಾಬಾದ್ ಎಂಬ ಘೋಷಣೆಯನ್ನೂ ಹಾಕಿದರು. ಇದೇ ಸಂದರ್ಭದಲ್ಲಿ ಅವರತ್ತ ಸದನದ ಭದ್ರತಾ ಸಿಬ್ಬಂದಿ ಧಾವಿಸಿದರು.
ಭದ್ರತಾ ಸಿಬ್ಬಂದಿ ಅವರನ್ನು ಸದನದಿಂದ ಹೊರಗೆ ಎಳೆದುಕೊಂಡು ಹೋಗುತ್ತಿದ್ದಂತೆಯೇ ಕುಪಿತಗೊಂಡಿದ್ದ ಆಪ್ ಶಾಸಕರಾದ ಅಮಾನತುಲ್ಲಾ ಖಾನ್, ನಿತಿನ್ ತ್ಯಾಗಿ ಮತ್ತು ಇತರ ಹಲವರು ಇಬ್ಬರತ್ತ ನುಗ್ಗಿ ಮನಬಂದಂತೆ ಥಳಿಸಿದರು. ಸುಮಾರು ಮೂವತ್ತು ನಿಮಿಷಗಳ ಕಾಲ ಸದನದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಸದನಕ್ಕೆ ಅಗೌರವ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ನಿರ್ಣಯ ಮಂಡಿಸಿ, ಅಂಗೀಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.