ಅತಿಕ್ರಮಣ ತೆರವಿನ ವಿರುದ್ಧ ಭಾರಿ ಪ್ರತಿಭಟನೆ : ದೆಹಲಿ ಆಪ್ ಶಾಸಕ ಬಂಧನ
Team Udayavani, May 12, 2022, 5:55 PM IST
ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅತಿಕ್ರಮಣ ವಿರೋಧಿ ಅಭಿಯಾನವನ್ನು ಮುಂದುವರೆಸಿದ್ದು, ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ಪೊಲೀಸರು ಮದನ್‌ಪುರ ಖಾದರ್‌ನಲ್ಲಿ ಗುರುವಾರ ಬಂಧಿಸಿದ್ದಾರೆ.
ಗುರುವಾರ ದಕ್ಷಿಣ ದೆಹಲಿಯ ಮದನ್‌ಪುರ ಖಾದರ್ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನದ ವೇಳೆ ಭದ್ರತಾ ಸಿಬ್ಬಂದಿಯ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಪೊಲೀಸರು ನನ್ನನ್ನು ಬಂಧಿಸಿದ್ದಾರೆ ಆದರೆ ನನ್ನನ್ನು ಬಂಧಿಸಬಹುದು, ನನ್ನ ಆತ್ಮವನ್ನಲ್ಲ” ಎಂದು ಖಾನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬೆಂಬಲಿಗರು ಮತ್ತು ಸ್ಥಳೀಯರೊಂದಿಗೆ ಕಾರ್ಯಾಚರಣೆಯ ವಿರುದ್ಧ ಪ್ರತಿಭಟನೆ ನಡೆಸಿದ ಶಾಸಕ ಅಮಾನತುಲ್ಲಾ ಖಾನ್ ಮತ್ತು ಇತರರನ್ನು ಬಂಧಿಸಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಾವು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH AAP MLA Amanatullah Khan detained by Delhi police at Madanpur Khadar, where SDMC is conducting an anti-encroachment drive#Delhi pic.twitter.com/ZyKNeNPOg8
— ANI (@ANI) May 12, 2022
ಮೇ 9 ರಂದು, ಎಎಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಶಾಹೀನ್ ಬಾಗ್‌ನಲ್ಲಿ ನಾಗರಿಕ ಸಂಸ್ಥೆ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ತಡೆಯಲು ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತು ಅವರ ಬೆಂಬಲಿಗರ ವಿರುದ್ಧ ಎಸ್‌ಡಿಎಂಸಿ ದೂರು ದಾಖಲಿಸಿದೆ. “ಶಾಹೀನ್ ಬಾಗ್‌ನಲ್ಲಿ ಬುಲ್ಡೋಜರ್ ಕಾರ್ಯಾಚರಣೆಯ ನಂತರ, ದೆಹಲಿ ಪೊಲೀಸರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತು ಅವರ ಬೆಂಬಲಿಗರ ವಿರುದ್ಧ ಎಸ್‌ಡಿಎಂಸಿ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 186,353,34 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.