Delhi Chalo 2 ದಿನ ಸ್ಥಗಿತ; ಖನೌರಿ ಗಡಿಯಲ್ಲಿ ರೈತರು-ಪೊಲೀಸರ ಘರ್ಷಣೆ, ರೈತ ನಿಧನ
ರೈತರ ಆಕ್ರೋಶ; ತಾತ್ಕಾಲಿಕವಾಗಿ 2 ದಿನ ಪ್ರತಿಭಟನೆ ಸ್ಥಗಿತ, ನಾಳೆ ಮುಂದಿನ ನಿರ್ಣಯ: ಕೆಎಂಎಸ್
Team Udayavani, Feb 22, 2024, 12:36 AM IST
ಹೊಸದಿಲ್ಲಿ: ಕೇಂದ್ರ ಸರಕಾರದೊಂದಿಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ “ದಿಲ್ಲಿ ಚಲೋ’ ಮುಂದುವರಿಸಿ ರಾಷ್ಟ್ರ ರಾಜಧಾನಿಯತ್ತ ತೆರಳುತ್ತಿದ್ದ ಪ್ರತಿಭಟನನಿರತ ರೈತರು ಬುಧವಾರ ಸಂಜೆಯೇ ತಮ್ಮ ನಡಿಗೆಯನ್ನು ಮೊಟಕುಗೊಳಿಸಿದ್ದಾರೆ. ಖನೌರಿ ಗಡಿ ಬಳಿಯ ಘರ್ಷಣೆಯಲ್ಲಿ ಯುವ ರೈತ ನೊಬ್ಬ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ 2 ದಿನಗಳವರೆಗೆ ಪ್ರತಿಭಟನೆ ಸ್ಥಗಿತಗೊಳಿಸುತ್ತಿರುವು ದಾಗಿ ರೈತ ಮುಖಂಡರು ಘೋಷಿಸಿದ್ದಾರೆ.
ಈ ಸಂಬಂಧಿಸಿದಂತೆ ಕಿಸಾನ್ ಮಜದೂರ್ ಸಂಘರ್ಷ (ಕೆಎಂಎಸ್) ನಾಯಕ ಸರ್ವಾನ್ ಸಿಂಗ್ ಪಂಧೇರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಖನೌರಿಯಲ್ಲಿ ನಡೆದ ಘಟನೆ ಬಗ್ಗೆ ನಾವು ಚರ್ಚೆ ನಡೆಸುತ್ತೇವೆ. ದಿಲ್ಲಿ ಕಡೆಗಿನ ನಮ್ಮ ಪ್ರತಿಭಟನೆ ಜಾಥಾವನ್ನು 2 ದಿನ ಸ್ಥಗಿತಗೊಳಿಸುತ್ತಿದ್ದೇವೆ. ಚಳವಳಿಯ ಮುಂದಿನ ಭಾಗವೇನು, ಸಂಪೂರ್ಣ ಪರಿಸ್ಥಿತಿ ಏನು ಎಂಬುದರ ಬಗ್ಗೆ ಶುಕ್ರವಾರ ಸಂಜೆ ತಿಳಿಸುತ್ತೇವೆ ಎಂದಿದ್ದಾರೆ.
ಖನೌರಿಯಲ್ಲಿ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಈ ಸಂದರ್ಭದಲ್ಲಿ ಶುಭ ಕರಣ್ ಸಿಂಗ್ (21) ಎಂಬ ಯುವರೈತ ಸೇರಿ ಮೂವರು ಗಾಯಗೊಂಡಿದ್ದರು. ಅವರನ್ನು ಪಟಿಯಾಲದ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಅಲ್ಲಿ ಶುಭ ಕರಣ್ ಮೃತಪಟ್ಟಿದ್ದಾರೆ. ಪೊಲೀಸರ ರಬ್ಬರ್ ಗುಂಡಿನ ದಾಳಿಯಿಂದಲೇ ಆತ ಮೃತಪಟ್ಟಿದ್ದಾನೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) (ಸಿಧುಪರ್) ನಾಯಕ ಕಾಕಾ ಸಿಂಗ್ ಕೊಡ್ತಾ ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಹಲವಾರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಶುಭ ಕರಣ್ ಸಿಂಗ್ ಸಾವಿನ ಹಿನ್ನೆಲೆಯಲ್ಲಿಯೇ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಗಿದೆಯಾದರೂ ಈ ಬಗ್ಗೆ ಪೊಲೀಸರು ಯಾವುದೇ ಸ್ಪಷ್ಟನೆ ನೀಡಿಲ್ಲ.ಇದಕ್ಕೂ ಮುನ್ನ ಶಂಭು ಮತ್ತು ಖನೌರಿ ಗಡಿಗಳಲ್ಲಿ ದಿಲ್ಲಿಯತ್ತ ಸಾಗಲು 1,200 ಟ್ರ್ಯಾಕ್ಟರ್‌ಗಳು, 1,400 ಮಂದಿ, 300 ಕಾರುಗಳು ಮತ್ತು 10 ಮಿನಿ ಬಸ್‌ಗಳು ಜಮಾಯಿಸಿದ್ದವು. ಈ ನಿಟ್ಟಿನಲ್ಲಿ ಗಡಿಗಳಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು.
12 ಪೊಲೀಸರಿಗೆ ಗಾಯ: ಹರಿಯಾಣ ಪೊಲೀಸ್
160 ರೈತರಿಗೆ ಗಾಯ: ಪಂಜಾಬ್ ಸರಕಾರ ವರದಿ
ದತ್ತ ಸಿಂಗ್-ಖನೌರಿ ಗಡಿಯಲ್ಲಿ ಪ್ರತಿಭಟನನಿರತ ರೈತರು ಪೊಲೀಸರನ್ನು ಸುತ್ತುವರಿದು ಕಳೆಗಳಿಗೆ ಮೆಣಸಿನಕಾಯಿ ಸುರಿದು ಬೆಂಕಿ ಹಚ್ಚಿ, ಘಾಟು ಎಬ್ಬಿಸಿದ್ದಾರೆ. ಅಲ್ಲದೆ ಪೊಲೀಸರ ಮೇಲೆಯೇ ದೊಣ್ಣೆ ಮತ್ತು ಮಚ್ಚುಗಳನ್ನು ಬಳಸಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ 12 ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹರಿಯಾಣ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದೇ ವೇಳೆ ಪಂಜಾಬ್ ಸರಕಾರವು ಹೇಳಿಕೆ ನೀಡಿದ್ದು, ಶಾಂತವಾಗಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಹರಿಯಾಣ ಪೊಲೀಸರು ಅಶ್ರುವಾಯು ಪ್ರಯೋಗಿಸುತ್ತಿದ್ದು, ಇದರಿಂದ 160 ರೈತರು ಗಾಯಗೊಂಡಿದ್ದಾರೆ ಎಂದಿದೆ. ಕೇಂದ್ರ ಗೃಹ ಸಚಿವಾಲಯಕ್ಕೆ ಬರೆದಿರುವ ಪತ್ರದಲ್ಲಿ ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಈ ವಿಷಯವನ್ನು ಉಲ್ಲೇಖಿಸಿದ್ದಾರೆ.
5ನೇ ಸುತ್ತಿನ ಮಾತುಕತೆಗೆ ಬನ್ನಿ: ಕೇಂದ್ರ ಸರಕಾರ
ಪ್ರತಿಭಟನೆಯ ಬಿಸಿ ಹೆಚ್ಚುತ್ತಿರುವಂತೆಯೇ ರೈತರೊಂದಿಗೆ ಮತ್ತೂಂದು ಸುತ್ತಿನ ಮಾತುಕತೆ ನಡೆಸಲು ಕೇಂದ್ರ ಸರಕಾರ ನಿಶ್ಚಯಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರು ಪ್ರತಿಭಟನನಿರತ ರೈತ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಎಂಎಸ್‌ಪಿ ಸಹಿತ ಎಲ್ಲ ವಿಚಾರಗಳನ್ನು ಚರ್ಚಿಸಲು ನಾವು ಸಿದ್ದರಿದ್ದೇವೆ. ಮಾತುಕತೆ ಮೂಲಕ ಮಾತ್ರವೇ ಸಮಸ್ಯೆ ಬಗೆಹರಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ರೈತ ನಾಯಕರನ್ನು ಮಾತುಕತೆಗೆ ಆಹ್ವಾನಿಸುತ್ತಿದ್ದು, ಶಾಂತಿ ಕಾಯ್ದುಕೊಳ್ಳುವಂತೆ ಪ್ರತಿಭಟನನಿರತ ರೈತರಿಗೆ ಮನವಿ ಮಾಡುತ್ತಿದ್ದೇನೆ ಎಂದು ಮುಂಡಾ ಹೇಳಿದ್ದಾರೆ. ಈ ಪ್ರಸ್ತಾವದ ಬಗ್ಗೆ ಚಿಂತನೆ ನಡೆಸುವುದಾಗಿ ರೈತ ನಾಯಕ ಸರ್ವಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.