Arvind Kejriwal: ಗೋವಾಕ್ಕೆ ಆಗಮಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
Team Udayavani, Jan 19, 2024, 12:22 PM IST
ಪಣಜಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಅರವಿಂದ್ ಕೇಜ್ರಿವಾಲ್ ಗೋವಾಕ್ಕೆ ಆಗಮಿಸಿದ್ದಾರೆ. ಕೇಜ್ರಿವಾಲ್ ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರವರು ಆಗಮಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ರಾತ್ರಿ 7:30 ರ ಸುಮಾರಿಗೆ ಉತ್ತರ ಗೋವಾದ ಮೊಪಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಸುದ್ಧಿಗಾರರೊದಿಗೆ ಮಾತನಾಡಿ- “ನಾವು ಗೋವಾದಲ್ಲಿ ಇಬ್ಬರು ಶಾಸಕರನ್ನು ಹೊಂದಿದ್ದೇವೆ ಮತ್ತು ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೆಂಜಿ ವಿಗಾಶ್ ಅವರು ಬಹಳ ಸಮಯದಿಂದ ನಮಗೆ ದೂರವಾಣಿ ಕರೆ ಮಾಡುತ್ತಿದ್ದಾರೆ, ಗೋವಾದಲ್ಲಿ ನಮ್ಮ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ” ಎಂದು ಮಾಹಿತಿ ನೀಡಿದರು.
ಅಲ್ಲದೆ, ಇಂದು ಆಪ್ ನ ಗೋವಾ ರಾಜ್ಯಾಧ್ಯಕ್ಷ ಅಮಿತ್ ಪಾಲೇಕರ್ ಅವರ ನಿವಾಸದಲ್ಲಿ ಸ್ನೇಹ ಭೋಜನ ಇರುವುದರಿಂದ ಹಾಜರಾಗುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಉಪಸ್ಥಿತರಿದ್ದರು.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋವಾ ರಾಜ್ಯದ ಸಿದ್ಧತೆಗಳನ್ನು ಅರವಿಂದ್ ಕೇಜ್ರಿವಾಲ್ ಪರಿಶೀಲಿಸಲಿದ್ದಾರೆ. ರಾಜ್ಯದಲ್ಲಿ ಪಕ್ಷದ ಶಾಸಕರು, ರಾಜ್ಯಾಧ್ಯಕ್ಷರು ಹಾಗೂ ಹಿರಿಯ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ. ಎಎಪಿ ಭಾರತ ಮೈತ್ರಿಕೂಟದ ಭಾಗವಾಗಿದೆ ಆದರೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ, ಗೋವಾದಲ್ಲಿ ಪಕ್ಷಕ್ಕೆ ಸ್ಥಾನ ಸಿಗುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಆಮ್ ಆದ್ಮಿ ಪಕ್ಷವು ಗೋವಾದಲ್ಲಿ ಒಂದು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Thirthahalli: ನೇಣು ಬಿಗಿದುಕೊಂಡು ಬಾಳೆಬೈಲು ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.