ಜಾಕ್ವೆಲಿನ್ ವಿದೇಶ ಪ್ರಯಾಣ: ಹೊಸ ಮನವಿಗೆ ಇಡಿ ಉತ್ತರ ಕೋರಿದ ದೆಹಲಿ ನ್ಯಾಯಾಲಯ
Team Udayavani, Jan 16, 2023, 8:20 PM IST
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿರುವ ಹೊಸ ಮನವಿಯ ಕುರಿತು ದೆಹಲಿ ನ್ಯಾಯಾಲಯ ಸೋಮವಾರ ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ಕೇಳಿದೆ.
ವೃತ್ತಿಪರ ಕೆಲಸಕ್ಕಾಗಿ ತಿಂಗಳ ಕೊನೆಯ ವಾರದಲ್ಲಿ ದುಬೈಗೆ ಪ್ರಯಾಣಿಸಲು ಫೆರ್ನಾಂಡಿಸ್ ಸಲ್ಲಿಸಿರುವ ಅರ್ಜಿಯ ಕುರಿತು ಜನವರಿ 25 ರೊಳಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಇಡಿಗೆ ಸೂಚಿಸಿದ್ದಾರೆ.
“ಆರೋಪದ ಪ್ರಶ್ನೆಯನ್ನು ಮೊದಲು ನಿರ್ಧರಿಸಲಿ” ಎಂದು ನ್ಯಾಯಾಧೀಶರು ಸೂಚಿಸಿದ ನಂತರ ನಟಿ ಡಿಸೆಂಬರ್ 22 ರಂದು ತನ್ನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ವಿದೇಶಕ್ಕೆ ಹೋಗಲು ಅನುಮತಿಗಾಗಿ ಮಾಡಿದ ಮನವಿಯನ್ನು ನ್ಯಾಯಾಲಯದಿಂದ ಹಿಂಪಡೆದಿದ್ದರು.
200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫರ್ನಾಂಡೀಸ್ ಅವರು ಸೋಮವಾರ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ದೆಹಲಿ ಪೊಲೀಸರು ತನಿಖೆ ನಡೆಸುತ್ತಿರುವ ಸುಲಿಗೆ ಪ್ರಕರಣದಲ್ಲಿ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ. ನವೆಂಬರ್ 15, 2022 ರಂದು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಫೆರ್ನಾಂಡಿಸ್ ಅವರಿಗೆ ನಿಯಮಿತ ಜಾಮೀನು ನೀಡಲಾಗಿತ್ತು.
ನ್ಯಾಯಾಧೀಶರು ಆಗಸ್ಟ್ 31 ರಂದು ಇಡಿ ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು ಫರ್ನಾಂಡಿಸ್ ಅವರನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.