ಫ್ಯಾಶನ್ ಡಿಸೈನರ್, ಮನೆ ಕೆಲಸದಾಳು ನಿಗೂಢ ಸಾವು; ಮೂವರು ಅರೆಸ್ಟ್
Team Udayavani, Nov 15, 2018, 11:24 AM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯ ವಸಂತ ಕುಂಜ್ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ದಿಲ್ಲಿ ಮೂಲದ ಫ್ಯಾಶನ್ ಡಿಸೈನರ್ 53ರ ಹರೆಯದ ಮಾಲಾ ಲಖಾನಿ ಮತ್ತು ಆಕೆಯ ಮನೆ ಕೆಲಸದಾಳು ನಿಗೂಢ ಸನ್ನಿವೇಶದಲ್ಲಿ ಸತ್ತು ಬಿದ್ದಿರುವುದು ಪತ್ತೆಯಾಗಿದೆ.
50ರ ಹರೆಯದ ಮನೆ ಕೆಲಸದಾಳನ್ನು ಬಹಾದ್ದೂರ್ ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದು ಒಡನೆಯೇ ತನಿಖೆ ಆರಂಭಿಸಿರುವ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಕನಿಷ್ಠ ಮೂವರನ್ನು ಬಂಧಿಸಿದ್ದಾರೆ.
ಎಲ್ಲ ಬಂಧಿತ ಆರೋಪಿಗಳು ತಾವು ಅಪರಾಧ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ಮುಖ್ಯ ಆರೋಪಿಯನ್ನು ರಾಹುಲ್ ಅನ್ವರ್ ಎಂದು ಗುರುತಿಸಲಾಗಿದೆ. ಈತ ಫ್ಯಾಶನ್ ಡಿಸೈನರ್ ಮಾಲಾ ಲಖಾನಿ ಅವರ ವರ್ಕ್ ಶಾಪ್ ನಲ್ಲಿ ಟೈಲರ್ ಆಗಿ ದುಡಿಯುತ್ತಿದ್ದ.
ಮುಖ್ಯ ಆರೋಪಿ ರಾಹುಲ್ ಲೂಟಿ ಮಾಡುವ ಉದ್ದೇಶದಿಂದ ತನ್ನ ಇಬ್ಬರು ಸಂಬಂಧಿಕರನ್ನು ಬಳಸಿಕೊಂಡು ಕೊಲೆ ಕೃತ್ಯ ಎಸಗಿದ್ದಾನೆ ಎಂದು ದಿಲ್ಲಿ ಪೊಲೀಸ್ ಜಂಟಿ ಕಮಿಷನರ್ ಆಜಯ್ ಚೌಧರಿ ತಿಳಿಸಿದ್ದಾರೆ.
ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.