Delhi Govt: ದೆಹಲಿ ಸಿಎಂ ರೇಸ್ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ
ಆತಿಶಿಗೋ, ಪರಿಣಿತಿ ಪತಿಗೋ.. ಯಾರಿಗೆ ಸಿಎಂ ಪಟ್ಟ
Team Udayavani, Sep 16, 2024, 11:45 AM IST
ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿ ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಇನ್ನೆರಡು ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರವಿವಾರ (ಸೆ.15) ಘೋಷಿಸಿದ್ದಾರೆ. ಅಲ್ಲದೆ ಆಮ್ ಆದ್ಮಿ ಪಕ್ಷದವರೇ ಮುಂದಿನ ಸಿಎಂ ಆಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದರು.
ಮುಂದೆ ಜನರು ತೀರ್ಪು ನೀಡುವವರೆಗೆ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದಿದ್ದಾರೆ. ಹೀಗಾಗಿ ಇದೀಗ ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.
ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ ಚುನಾವಣೆಯ ಜೊತೆಗೆ ನವೆಂಬರ್ ನಲ್ಲಿ ಚುನಾವಣೆ ನಡೆಸಬೇಕೆಂದು ಕೇಜ್ರಿವಾಲ್ ರವಿವಾರ ಒತ್ತಾಯಿಸಿದ್ದರು. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಜನರ ಬಳಿಗೆ ಹೋಗುತ್ತೇನೆ ಮತ್ತು ಮರುಚುನಾವಣೆ ನಂತರವೇ ಉನ್ನತ ಕಚೇರಿಗೆ ಮರಳುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ ಕೇಜ್ರಿವಾಲ್ ನಂತರದ ಎಎಪಿಯ ಉನ್ನತ ನಾಯಕರಾದ ಸಿಸೋಡಿಯಾ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿಲ್ಲ ಎಂಬುದು ಸಾಬೀತಾಗಿದೆ.
ಮುಂದಿನ ಸಿಎಂ ಕೆಲವೇ ತಿಂಗಳುಗಳ ಕಾಲ ಕೆಲಸ ಮಾಡಬೇಕಾದರೂ ಸರಿಯಾದ ವ್ಯಕ್ತಿಯನ್ನೇ ಆಯ್ಕೆ ಮಾಡಲು ಆಪ್ ಮುಂದಾಗಿದೆ. ಪಕ್ಷದ ನಾಯಕರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿರುವ ಕಾರಣ ಮುಂದೆ ಜನರ ಎದುರು ಹೋಗುವ ವೇಳೆ ಸರಿಯಾದ ಆಡಳಿತ ನಡೆಸುವ ನಾಯಕತ್ವದ ಅಗತ್ಯ ಪಕ್ಷಕ್ಕಿದೆ.
ದೆಹಲಿ ಮುಂದಿನ ಸಿಎಂ ಆಗಬಹುದಾದ ಕೆಲವು ಹೆಸರುಗಳು ಇಲ್ಲಿದೆ
1 ಆತಿಶಿ
ದೆಹಲಿ ಸರ್ಕಾರದಲ್ಲಿ ಶಿಕ್ಷಣ, ಲೋಕೋಪಯೋಗಿಯಂತಹ ಪ್ರಮುಖ ಖಾತೆಗಳನ್ನು ಹೊಂದಿರುವ ಆತಿಶಿ ಅವರು ದೆಹಲಿ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆಕ್ಸ್ ಫರ್ಡ್ ಪದವೀಧರೆ ಆತಿಶಿ ದೆಹಲಿಯ ಶಾಲೆಗಳ ಉನ್ನತೀಕರಣಕ್ಕೆ ಹೆಸರುವಾಸಿಯಾಗಿದ್ದಾರೆ. ಕಲ್ಕಾಜಿ ಕ್ಷೇತ್ರದ 43ರ ಹರೆಯದ ಶಾಸಕಿ ಅತಿಶಿ ಅವರು, ಮನೀಶ್ ಸಿಸೋಡಿಯಾ ಜೈಲು ಪಾಲಾದಾಗ ಸಚಿವೆಯಾದರು. ಪ್ರಮುಖ ನಾಯಕರಾದ ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಬ್ಬರೂ ಜೈಲಿನಲ್ಲಿದ್ದಾಗ ಅತಿಶಿ ಪಕ್ಷದ ಮತ್ತು ಸರ್ಕಾರದ ಮುಂಚೂಣಿಯಲ್ಲಿದ್ದು ನಡೆಸಿದರು. ಆಗಸ್ಟ್ 15 ರಂದು, ದೆಹಲಿ ಸರ್ಕಾರದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಆತಿಶಿ ಅವರನ್ನು ಕೇಜ್ರಿವಾಲ್ ಆಯ್ಕೆ ಮಾಡಿದ್ದರು.
2 ಸೌರಭ್ ಭಾರದ್ವಾಜ್
ಗ್ರೇಟರ್ ಕೈಲಾಶ್ ನ ಮೂರು ಬಾರಿಯ ಶಾಸಕ ಸೌರಭ್ ಭಾರದ್ವಾಜ್ ಆರೋಗ್ಯ ಸಚಿವರಾಗಿದ್ದಾರೆ. ಇವರು ಕೂಡಾ ಸಿಸೋಡಿಯಾ ಬಂಧನದ ಬಳಿಕ ಸಂಪುಟದ ಭಾಗವಾಗಿದ್ದರು. ಹಿಂದೆ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಭಾರದ್ವಾಜ್ ಅರವಿಂದ ಕೇಜ್ರಿವಾಲ್ ಅವರ 49 ದಿನಗಳ ಸರ್ಕಾರದಲ್ಲಿಯೂ ಸಚಿವರಾಗಿದ್ದರು. ಅವರು ಆಪ್ ನ ರಾಷ್ಟ್ರೀಯ ವಕ್ತಾರರಾಗಿದ್ದಾರೆ.
3 ರಾಘವ್ ಛಡ್ಡಾ
ರಾಜ್ಯಸಭಾ ಸಂಸದರಾಗಿರುವ ರಾಘವ್ ಛಡ್ಡಾ ಅವರು ಆಪ್ ನ ಕಾರ್ಯಕಾರಣಿ ಮತ್ತು ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರಾಗಿದ್ದಾರೆ. ಈ ಹಿಂದೆ ಚಾರ್ಟೆಡ್ ಅಕೌಂಟೆಂಟ್ ಆಗಿದ್ದ ಛಡ್ಡಾ ಆಪ್ ಉದಯದ ಬಳಿಕ ರಾಜಕೀಯ ಸೇರಿದರು. ರಾಜಿಂದರ್ ನಗರ್ ಶಾಸಕರಾಗಿದ್ದ ರಾಘವ್, 2022ರಲ್ಲಿ ಪಂಜಾಬ್ ನಲ್ಲಿ ಆಪ್ ಗೆಲುವಿಗೆ ಪ್ರಮುಖ ಕಾರಣರಾಗಿದ್ದರು. 35 ವರ್ಷದ ರಾಘವ್ ಛಡ್ಡಾ ಆಪ್ ನ ಯುವ ನಾಯಕರಲ್ಲಿ ಪ್ರಮುಖ. ಇತ್ತೀಚೆಗೆ ಅವರು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರನ್ನು ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.