ಪದ್ಮ ಪ್ರಶಸ್ತಿಗಾಗಿ ವೈದ್ಯರ ಹೆಸರುಗಳನ್ನು ಕಳುಹಿಸಲು ದೆಹಲಿ ಸರ್ಕಾರ ನಿರ್ಧಾರ
Team Udayavani, Jul 27, 2021, 1:54 PM IST
ನವ ದೆಹಲಿ : ಭಾರತ ಸರ್ಕಾರ ಕೊಡಮಾಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳಿಗಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಶಿಫಾರಸ್ಸು ಮಾಡಲು ನಿರ್ಧರಿಸಿದೆ ಎಂದು ತಿಳಿಸಿದೆ.
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್, ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಜನರ ಸೇವೆಯಲ್ಲಿತೊಡಗಿಕೊಂಡು ಕೋವಿಡ್ ಸೋಂಕಿನ ವಿರುದ್ದ ಹೋರಾಟ ಮಾಡಿದ ವೈದ್ಯರುಗಳು ಹಾಗೂ ಆರೋಗ್ಯ ಸಿಬ್ಬಂದಿಗಳ ಹೆಸರನ್ನು ಪದ್ಮ ಪ್ರಶಸ್ತಿಗಳಿಗಾಗಿ ಸೂಚಿಸುತ್ತೇವೆ ಎಂದು ಹೇಳಿದ್ದಾರೆ.
ಕೋವಿಡ್ ಬಿಕ್ಕಟ್ಟಿನ ಸಂಧರ್ಭದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಸೇವೆ ಶ್ಲಾಘನೀಯ, ಕೋವಿಡ್ ಬಿಕ್ಕಟ್ಟಿನ ಸಂಧರ್ಭದಲ್ಲಿ ಸೋಂಕಿನ ವಿರುದ್ಧ ಕಾರ್ಯ ನಿರ್ವಹಿಸಿದ ವೈದ್ಯರ ಹೆಸರುಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಲು ನಿರ್ಧರಿಸಿದ್ದು, ದೆಹಲಿಯ ಸಾರ್ವಜನಿಕರು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಯೂಮೆಚ್ಚುಗೆಯ ಸೇವೆ ಸಲ್ಲಿಸಿದ ವೈದ್ಯರ ಅಥವಾ ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ಮಿಂಚಂಚೆ ಅಥವಾ ಈಮೇಲ್([email protected]) ಗೆ ವಿವರಗಳೊಂದಿಗೆ ಕಳುಹಿಸಿಕೊಡಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : 75ರ ಸ್ವಾತಂತ್ರ್ಯೋತ್ಸವ : ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯಕ್ಕೆ ಮೋದಿ ಕರೆ
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಸೇವೆ ಮೆಚ್ಚುವಂತದ್ದು, ನಾವು ಅವರಿಗೆ ಗೌರವಿಸಬೇಕು, ದೇಶವೇ ಅವರ ಸೇವೆಗೆ ಕೃತಜ್ಞರಾಗಿರಬೇಕು. ಹಾಗಾಗಿ, ಕೋವಿಡ್ ಸೋಂಕಿನ ವಿರುದ್ಧ ಜನಮೆಚ್ಚುಗೆಯ ಸೇವ ಸಲ್ಲಿಸಿದ ವೈದ್ಯಕೀಯ ಸಿಬ್ಬಂದಿಗಳಿಗೆ ಪದ್ಮ ಪ್ರಶಸ್ತಿಗಳನ್ನು ನೀಡುವಂತೆ ನಮ್ಮ ಸರ್ಕಾರ ಕೇಂದ್ರ ಸರ್ಕಾರವನ್ನು ವಿನಂತಿ ಮಾಡಿಕೊಳ್ಳುತ್ತದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿಗಳಿಗೆ ಜನರನ್ನು ನಾಮನಿರ್ದೇಶನ ಮಾಡುವಂತೆ ಕೇಳಿಕೊಂಡಿದ್ದರು.
1954 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ‘ವಿಭಿನ್ನ ಕಾರ್ಯ’ಗಳನ್ನು ಗುರುತಿಸಲು ಪ್ರಯತ್ನಿಸಲಾಗುತ್ತದೆ ಮತ್ತು ಇದನ್ನು ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಗಾಗಿ ನೀಡಲಾಗುತ್ತದೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಾಮಾಜಿಕ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ / ವಿಭಾಗಗಳಲ್ಲಿ ಸೇವೆ ಸಲ್ಲಿಸಿದವರಿಗೆ ಘೋಷಿಸಲಾಗುತ್ತದೆ.
ಇದನ್ನೂ ಓದಿ : ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.