ದೆಹಲಿ ಮದ್ಯ ಹಗರಣ: ಫೆ.26 ರಂದು ವಿಚಾರಣೆಗೆ ಹಾಜರಾಗುವಂತೆ ಮನೀಶ್ ಸಿಸೋಡಿಯಾಗೆ ಸಿಬಿಐ ಸಮನ್ಸ್
Team Udayavani, Feb 20, 2023, 5:58 PM IST
ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಸಿಬಿಐ ತನ್ನನ್ನು ವಿಚಾರಣೆಗೆ ಕರೆದಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಮನೀಶ್ ಸಿಸೋಡಿಯಾ ಸಿಬಿಐ ಭಾನುವಾರ (ಫೆಬ್ರವರಿ 19) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಬಜೆಟ್ ಅಂತಿಮಗೊಳಿಸಲು ನನಗೆ ಹೆಚ್ಚಿನ ಸಮಯವಕಾಶ ನೀಡುವಂತೆ ಸಿಬಿಐಗೆ ಮನವಿ ಮಾಡಿಕೊಂಡಿದ್ದೆ. ಅದರಂತೆ ತಾನು ಮಾಡಿದ ಮನವಿಯನ್ನು ಸ್ವೀಕರಿಸಿದ ಸಿಬಿಐ ಫೆಬ್ರವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಅದರಂತೆ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ, ಅಬಕಾರಿ ಇಲಾಖೆಯ ಉಸ್ತುವಾರಿಯನ್ನೂ ವಹಿಸಿದ್ದ ಸಿಸೋಡಿಯಾ ಅವರನ್ನು ಮದ್ಯ ಹಗರಣಕ್ಕೆ ಸಂಬಂಧಿಸಿ ಕಳೆದ ವರ್ಷ ಅಕ್ಟೋಬರ್ 17 ರಂದು ವಿಚಾರಣೆ ನಡೆಸಲಾಯಿತು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನು ಸಹ ಶೋಧಿಸಲಾಗಿತ್ತು. “ಹಣದ ಜಾಡು ಮತ್ತು ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನದಲ್ಲಿ ಹಗರಣ ನಡೆದಿದೆ ಎಂಬ ವಿಚಾರದಲ್ಲಿ ಸಿಬಿಐ ಅಧಿಕಾರಿಗಳು ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಜಡೆ ಜಗಳ ಸಲ್ಲದು,ಅಧಿಕಾರಿಗಳ ಮೇಲೆ ಕಡಿವಾಣ ಅಗತ್ಯವಿದೆ: ಪ್ರಹ್ಲಾದ್ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.