ಮತ್ತೊಂದು ವಾರ ಲಾಕ್ ಡೌನ್ ಮುಂದುವರೆಸಿದ ದೆಹಲಿ ಸರ್ಕಾರ!
Team Udayavani, May 23, 2021, 2:35 PM IST
ನವದೆಹಲಿ : ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಸೋಂಕನ್ನ ಮತ್ತಷ್ಟು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೇಜ್ರಿವಾಲ್ ಸರ್ಕಾರ ಲಾಕ್ಡೌನ್ ವಿಸ್ತರಿಸಲು ನಿರ್ಧರಿಸಿದೆ. ಮುಂದಿನ ಸೋಮವಾರ ಅಂದ್ರೆ ಮಾರ್ಚ್ 31ರ ಬೆಳಗ್ಗೆವರೆಗೆ ಲಾಕ್ಡೌನ್ ಮುಂದುವರಿಯಲಿದೆ. ಒಂದು ವೇಳೆ ಅಷ್ಟರೊಳಗೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾದರೆ ಮುಂದಿನ ಮಂಗಳವಾರದಿಂದ ಲಾಕ್ ಡೌನ್ ಸಡಿಲಗೊಳಿಸುವ ಯೋಚನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತೊಂದು ಮಾಹಿತಿ ನೀಡಿರುವ ಅವರು, ದೆಹಲಿಯಲ್ಲಿ ಮೇ 31ರವರೆಗೆ ಕೋವಿಡ್ ಲಾಕ್ಡೌನ್ ಮುಂದುವರಿಯಲಿದೆ. ಒಂದು ವೇಳೆ ಸೋಂಕಿನ ಪ್ರಮಾಣ ಕಡಿಮೆಯಾಗಿದ್ರೆ, ಲಾಕ್ಡೌನ್ನಲ್ಲಿ ಹಂತಹಂತವಾಗಿ ಸಡಿಲಿಕೆ ಮಾಡಲಾಗುವುದು ಅಂತಾ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.