Delhi: ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧನಕ್ಕೊಳಗಾದ ವ್ಯಕ್ತಿ ಪೊಲೀಸ್ ಕಸ್ಟಡಿಯಲ್ಲಿ ಮೃತ್ಯು
18ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶೇಖ್ ಸಹದತ್ ...
Team Udayavani, Jul 23, 2023, 4:28 PM IST
ಹೊಸದಿಲ್ಲಿ: ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿತರಾನಾಗಿದ್ದ 36 ವರ್ಷದ ವ್ಯಕ್ತಿಯೊಬ್ಬ ಭಾನುವಾರ ನಿಗೂಢವಾಗಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 6.30 ರ ಸುಮಾರಿಗೆ ಕಸ್ಟಡಿ ಸಾವು ವರದಿಯಾಗಿದೆ. ಮೃತ ಶೇಖ್ ಸಹದತ್ ದೆಹಲಿಯ ಜಹಾಂಗೀರಪುರಿ ನಿವಾಸಿಯಾಗಿದ್ದು ಆತನನ್ನು ಇತರ ನಾಲ್ವರೊಂದಿಗೆ ಶನಿವಾರ ಬಂಧಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಹದತ್ ಈ ಹಿಂದೆ 18ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಸಹದತ್ ನನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿತ್ತು, ಆದರೆ ಇತರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಶನಿವಾರ ಸಂಜೆ ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಂತರ ಅವರನ್ನು ಠಾಣೆಗೆ ಕರೆದೊಯ್ದು ಲಾಕಪ್ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ 6.30ರ ಸುಮಾರಿಗೆ ಕರ್ತವ್ಯ ನಿರತ ಪೊಲೀಸ್ ಸಿಬಂದಿ ಸಹದತ್ ತೀವ್ರವಾಗಿ ಉಸಿರಾಡುತ್ತಿರುವುದನ್ನು ಗಮನಿಸಿದ್ದು, ಕೂಡಲೇ ಕರ್ತವ್ಯ ಅಧಿಕಾರಿಗೆ ಮಾಹಿತಿ ನೀಡಿದ್ದು, ಆತನನ್ನು ಬಿಎಸ್ಎ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಮೃತಪಟ್ಟಿರುವುದಾಗಿ ಘೋಷಿಸಲಾಯಿತು, ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.