Delhi; ಇಂದು ರೈತ-ಪೊಲೀಸ್ ಸಂಘರ್ಷ?
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ನಿಗದಿಗೆ ಆಗ್ರಹ 200 ರೈತ ಸಂಘಟನೆಗಳ ಸದಸ್ಯರಿಂದ ದಿಲ್ಲಿ ಚಲೋ
Team Udayavani, Feb 13, 2024, 6:35 AM IST
ಹೊಸದಿಲ್ಲಿ: ದೇಶದಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ ಕೇಂದ್ರ ಸರಕಾರ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಮಂಗಳವಾರ 25 ಸಾವಿರಕ್ಕೂ ಅಧಿಕ ರೈತರು ಹೊಸದಿಲ್ಲಿ ಚಲೋ ನಡೆಸಲಿದ್ದಾರೆ. ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ 200ಕ್ಕೂ ಅಧಿಕ ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ರೈತರು ರಾಷ್ಟ್ರ ರಾಜಧಾನಿಯತ್ತ ಧಾವಿಸುತ್ತಿದ್ದಾರೆ.
ಕಿಸಾನ್ ಮಜ್ದೂರ್ ಸಭಾ (ಕೆಎಂಎಂ) ಎಂಬ ರೈತರ ಸಂಘಟನೆ ರಚನೆ ಮಾಡಿಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ರೈತರು ಹೊಸದಿಲ್ಲಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ಈಗಾಗಲೇ ಭಾರೀ ಕ್ರಮಗಳನ್ನು ಕೈಗೊಂಡಿದ್ದಾರೆ. ರಸ್ತೆಗಳಿಗೆ ಅಡ್ಡವಾಗಿ ಪೊಲೀಸ್ ವಾಹನಗಳನ್ನು, ಬೃಹತ್ ಗಾತ್ರದ ಕಾಂಕ್ರೀಟ್ ಪಿಲ್ಲರ್‌ಗಳು, ಕಂಟೈನರ್‌ಗಳನ್ನು ಇರಿಸಲಾಗಿದೆ. ಆದರೂ ರೈತ ಸಂಘಟನೆ ಸದಸ್ಯರು ಹೊಸದಿಲ್ಲಿ ಪ್ರವೇಶ ಮಾಡಬಹುದು, ಪ್ರತಿಭಟನಕಾರರಿಂದ ಸಾರ್ವಜನಿಕ ಆಸ್ತಿಗೆ ಅಪಾಯ ಸಂಭವಿಸಬಹುದಾದ ಸಾಧ್ಯತೆಗಳಿವೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಮಾ. 12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಜ್ಯದಿಂದ ಹೊರಟ 73 ರೈತರ ಸೆರೆ: ಸಿಎಂ ಸಿದ್ದರಾಮಯ್ಯ ಖಂಡನೆ
ಬೆಂಗಳೂರು: “ದಿಲ್ಲಿ ಚಲೋ’ದಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯತ್ತ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದ ಭೂಪಾಲ್ ರೈಲ್ವೇ ನಿಲ್ದಾಣದಲ್ಲಿ ಮಧ್ಯರಾತ್ರಿ ಪೊಲೀಸರು ವಶಕ್ಕೆ ಪಡೆದ ಘಟನೆ ಸೋಮವಾರ ನಡೆದಿದೆ. ಈ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಬಲವಾಗಿ ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.