ದಿಲ್ಲಿ ನೋ ಫ್ಲೈ ಝೋನ್ : ಮೋದಿ ಕಾರ್ಯಕ್ರಮಕ್ಕೆ ಬರಲಾಗದ ಕೆಸಿಆರ್, ಜಗನ್
Team Udayavani, May 30, 2019, 3:41 PM IST
ಹೊಸದಿಲ್ಲಿ : ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರಿಗೆ ತಾಂತ್ರಿಕ ಕಾರಣಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಸಾಧ್ಯವಾಗಿದೆ.
ರಾಷ್ಟ್ರ ರಾಜಧಾನಿ ದಿಲ್ಲಿ ಸುತ್ತಮುತ್ತಲಿನ ವಾಯು ಪ್ರದೇಶವನ್ನು ಇಂದು ಗುರುವಾರ ಸಂಜೆ 4 ಗಂಟೆಯಿಂದಲೇ ಹಾರಾಟ ನಿಷಿದ್ಧ ಪ್ರದೇಶವನ್ನಾಗಿ ಘೋಷಿಸಲಾಗಿದೆ.
ರೆಡ್ಡಿ ಮತ್ತು ರಾವ್ ಅವರಿಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ವಿಜಯವಾಡದಿಂದ ದಿಲ್ಲಿಗೆ ಹೊರಡುವವರಿದ್ದರು. ಆದರೆ ದಿಲ್ಲಿ ನೋ ಫ್ಲೈ ಝೋನ್ ಆಗಿರುವುದರಿಂದ ಕೆಸಿಆರ್ ಇದೀಗ ಹೈದರಾಬಾದ್ ಗೆ ಮರಳುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸುಮಾರು 8,000 ಅತಿಥಿಗಳು ಭಾಗವಹಿಸುತ್ತಿದ್ದು ಇವರಲ್ಲಿ ವಿದೇಶೀ ಗಣ್ಯರು, ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರು ಗಣನೀಯ ಸಂಖ್ಯೆಯಲ್ಲಿದ್ದಾರೆ.
ಹಾಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ಭದ್ರತೆಯನ್ನು ಕಾಪಿಡುವ ಸಲುವಾಗಿ ದಿಲ್ಲಿ ಮತ್ತು ಸುತ್ತಮುತ್ತಲ ವಾಯು
ಪ್ರದೇಶವನ್ನು ಹಾರಾಟ ನಿಷಿದ್ಧ ಪ್ರದೇಶವನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.