Kejriwal ನಿವಾಸದ ಹೊರಗೆ ಪಟಾಕಿ ಸಿಡಿಸಿ ಸಂಭ್ರಮ: ಎಫ್ ಐಆರ್ ದಾಖಲಿಸಿದ ಪೊಲೀಸರು
Team Udayavani, Sep 14, 2024, 5:13 PM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ನಿವಾಸದ ಹೊರಗೆ ಪಟಾಕಿ ಸಿಡಿಸಿದ್ದಕ್ಕಾಗಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಸ್ವಾಗತಿಸಲು ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ನಿವಾಸದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಹೊರ ಹಾಕಿದ್ದರು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಸಾರ್ವಜನಿಕ ಸೇವಕರ ಹೊರಡಿಸಿದ ಆದೇಶಗಳಿಗೆ ಅವಿಧೇಯತೆ) ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಖ್ಯಮಂತ್ರಿ ಅಧಿಕೃತ ನಿವಾಸದ ಹೊರಗೆ ಪಟಾಕಿ ಸಿಡಿಸಿದ ಪ್ರಕರಣವನ್ನು ದಾಖಲಿಸಲಾಗಿದೆ.
ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ದೆಹಲಿ ಸರಕಾರ ನಿಷೇಧಿಸಿದೆ.
ಬಿಜೆಪಿ ಆಕ್ರೋಶ
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಪ್ರತಿಕ್ರಿಯಿಸಿ “ದೀಪಾವಳಿ ಅಥವಾ ಹಿಂದೂ ಧರ್ಮದ ಯಾವುದೇ ಹಬ್ಬ ಬಂದಾಗ ಎಎಪಿ ನಾಯಕರು ಘೋಷಣೆ ಮಾಡುತ್ತಾರೆ, ದೆಹಲಿ ಸಚಿವ ಮತ್ತು ಆಪ್ ನಾಯಕ ಗೋಪಾಲ್ ರಾಯ್ ಈ ವಿಷಯವನ್ನು ಅರಿತುಕೊಳ್ಳಬೇಕು. ಮೊನ್ನೆ ಯಷ್ಟೇ ಅವರು ನಿಷೇಧದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಿಎಂ ಮನೆ ಮುಂದೆ ಪಟಾಕಿ ಸುಡಲಾಯಿತು, ಆದರೆ ಸನಾತನ ಧರ್ಮಕ್ಕೆ ಮಾತ್ರ ನ್ಯಾಯಾಲಯವು ಹಸಿರು ಪಟಾಕಿಗಳನ್ನು ಸುಡಲು ಅನುಮತಿ ನೀಡಿದೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.