Delhi ; ಬಾಲಕಿ ಮೇಲೆ ಅಧಿಕಾರಿ ಮಾತ್ರವಲ್ಲದೆ ಬೇರೆಯವರಿಂದಲೂ ಅತ್ಯಾಚಾರ?
Team Udayavani, Aug 28, 2023, 11:49 PM IST
ಹೊಸದಿಲ್ಲಿ: ದಿಲ್ಲಿ ಸರಕಾರದ ಮಾಜಿ ಹಿರಿಯ ಅಧಿಕಾರಿಯಿಂದ ಅತ್ಯಾಚಾರಕ್ಕೊಳ ಗಾದ ಬಾಲಕಿ ಬೇರೆಯವರಿಂದಲೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳಾ? ಈ ಸಂಬಂಧಿಸಿದಂತೆ ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಎಂದು ದಿಲ್ಲಿ ಹೈಕೋರ್ಟ್ ಪೊಲೀಸರನ್ನು ಸೋಮವಾರ ಪ್ರಶ್ನಿಸಿದೆ.
ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲೇ ಇದ್ದಂಥ ಮಾಜಿ ಅಧಿಕಾರಿ ಪ್ರೇಮೋದಯ್ ಖಾಖಾ ಅವರ ನಿವಾಸದಲ್ಲೇ ಆಶ್ರಯ ಪಡೆದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭ ಧರಿಸಲು ಕಾರಣವಾಗಿದ್ದ. ಈ ಹಿನ್ನೆಲೆಯಲ್ಲಿ ಆಗಸ್ಟ್ 21ರಂದು ಆತನನ್ನು ಬಂಧಿಸಲಾಗಿತ್ತು.
ಈ ವೇಳೆ ಬಾಲಕಿ ತನ್ನ ವಿರುದ್ಧ ಬೇರೆ ಅವರೂ ಕೂಡ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹೇಳಿಕೆ ನೀಡಿದ್ದಳು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಾಲಕಿ ಮೇಲೆ ದೌರ್ಜನ್ಯ ಎಸಗಿದ ಆ ಇನ್ನಿತರರು ಯಾರು? ಅವರ ವಿರುದ್ಧ ಏನು ಕ್ರಮ ತೆಗದುಕೊಂಡಿದ್ದೀರಿ? ಎಂದು ಪ್ರಶ್ನಿಸಿದ್ದಲ್ಲದೇ, ಬಾಲಕಿಯ ಗುರುತನ್ನು ಗೌಪ್ಯವಾಗಿಡುವಂತೆ ಪೊಲೀಸರಿಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.