ದಿಲ್ಲಿ ಹಿಂಸಾಚಾರದ ಪ್ರತಿಧ್ವನಿ: ಸಂಸತ್ ರಣರಂಗ
Team Udayavani, Mar 3, 2020, 6:50 AM IST
ಹೊಸದಿಲ್ಲಿ: ದೇಶದ ರಾಜಧಾನಿಯಲ್ಲಿ ಈಚೆಗೆ ನಡೆದ ಹಿಂಸಾಚಾರವು ಸೋಮವಾರ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಆಕ್ರೋಶಭರಿತವಾಗಿ ಒತ್ತಾಯಿಸಿದ್ದು, ಒಂದು ಹಂತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ ಘಟನೆಯೂ ನಡೆಯಿತು.
ಬೆಳಗ್ಗೆ 11 ಗಂಟೆಗೆ ಆರಂಭವಾದ ಗದ್ದಲದ ವಾತಾವರಣ ಮತ್ತೆ ಮತ್ತೆ ಮುಂದುವರಿಯಿತು. ಇದರಿಂದಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪ ಮುಂದೂಡಬೇಕಾಯಿತು. ಸಂಜೆ 4.30ಕ್ಕೆ ಮತ್ತೆ ಸದನ ಸಮಾವೇಶಗೊಂಡಾಗಲೂ ಸ್ಥಿತಿ ಸುಧಾರಿಸದ್ದರಿಂದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಬೇಕಾಯಿತು.
ಜೋಷಿ ವಾಗ್ಧಾಳಿ
ವಿಪಕ್ಷಗಳು ಸದನದಲ್ಲಿ ಅನುಚಿತವಾಗಿ ನಡೆದುಕೊಳ್ಳುತ್ತಿವೆ. ಕಲಾಪ ಮುಂದುವರಿಸಿ ಎಂದು ಸಚಿವ ಪ್ರಹ್ಲಾದ್ ಜೋಷಿ ಲೋಕಸಭಾ ಅಧ್ಯಕ್ಷರಿಗೆ ಮನವಿ ಮಾಡಿದರು. 1984ರಲ್ಲಿ ಕಾಂಗ್ರೆಸಿಗರು 3 ಸಾವಿರ ಮಂದಿಯ ಕೊಲೆ ಮಾಡಿಸಿ, ತನಿಖೆಯನ್ನೇ ನಡೆಸಿರಲಿಲ್ಲ. ಆದರೆ ನಾವು ದಿಲ್ಲಿ ಘಟನೆಗಳ ಕುರಿತು ತನಿಖೆ ನಡೆಸಿ, ಶಾಂತಿ ಸ್ಥಾಪನೆಗೆ ಆದ್ಯತೆ ನೀಡಿದ್ದೇವೆ. ವಿಪಕ್ಷಗಳು ತೆÌàಷಮಯ ವಾತಾವರಣಕ್ಕೆ ಕುಮ್ಮಕ್ಕು ನೀಡುತ್ತಿವೆ ಎಂದು ದೂರಿದರು.
ರಾಜ್ಯಸಭೆಯಲ್ಲೂ ಗದ್ದಲ
ಮೇಲ್ಮನೆಯಲ್ಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ದಿಲ್ಲಿ ಗಲಭೆ ಮುಂದಿಟ್ಟು ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಗದ್ದಲವೆಬ್ಬಿಸಿದವು. ಗದ್ದಲದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಕಲಾಪಗಳನ್ನು ಸಭಾಪತಿ ವೆಂಕಯ್ಯ ನಾಯ್ಡು ಮುಂದೂಡಿದ್ದರು. ಮರಳಿ ಸದನ ಸಮಾವೇಶಗೊಂಡಾಗಲೂ ಪರಿಸ್ಥಿತಿ ಸುಧಾರಣೆ ಕಾಣದೆ ಇದ್ದಾಗ ಕಲಾಪ ಮುಂದೂಡಲಾಯಿತು.
ಎಳೆದಾಟ, ತಳ್ಳಾಟ
ಗದ್ದಲದ ಸಂದರ್ಭದಲ್ಲಿ ಬಿಜೆಪಿಯ ಕೆಲವು ಸಂಸದರು ತಮ್ಮನ್ನು ಹಿಡಿದು ಎಳೆದಾಡಿದರು ಎಂದು ಕೇರಳದ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ಸ್ಪೀಕರ್‌ಗೆ ಲಿಖೀತ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ಕಲಾಪ ನಿರ್ವಹಿಸುತ್ತಿದ್ದ ಬಿಜೆಪಿ ಸಂಸದೆ ರಮಾದೇವಿ ಇಂಥ ಘಟನೆ ತಪ್ಪೆಂದರು. ಅವರು ಕಲಾಪ ಮುಂದೂಡಿದರೂ ಬಿಜೆಪಿ ಸದಸ್ಯರು ಘೋಷಣೆ ಕೂಗುವುದನ್ನು ಮುಂದುವರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.