ಚುಡಾಯಿಸುತ್ತಿದ್ದವನಿಗೆ ಗತಿ ಕಾಣಿಸಿದ ದಿಲ್ಲಿಯ ‘ದಬಾಂಗ್’ ಮಹಿಳೆ
Team Udayavani, Feb 27, 2018, 6:55 PM IST
ಹೊಸದಿಲ್ಲಿ: ದಿಲ್ಲಿಯ “ದಬಾಂಗ್’ ಮಹಿಳೆಯೊಬ್ಬಳು ತನ್ನನ್ನು ಚುಡಾಯಿಸಿದ ಕಾಮುಕನೋರ್ವನ ಕಾಲರ್ ಹಿಡಿದು, ಕಪಾಳ ಮೋಕ್ಷ ಮಾಡಿ, ಆತನನ್ನು ಪೊಲೀಸ್ ಠಾಣೆಗೆ ಎಳೆದೊಯ್ದ ಘಟನೆ ವರದಿಯಾಗಿದೆ.
ಈ ಘಟನೆ ನಡೆದದ್ದು ಪಶ್ಚಿಮ ದಿಲ್ಲಿಯಲ್ಲಿ ಫೆ.25ರ ಭಾನುವಾರದಂದು. ಮಹಿಳೆಯು ತನ್ನ ಸ್ನೇಹಿತನ ಜತೆಗೆ ಕರೋಲ್ ಬಾಗ್‌ನ ಗಫರ್ ಮಾರ್ಕೆಟ್‌ಮಾರ್ಗವಾಗಿ ನಡೆದುಕೊಂಡು ಹೋಗುತ್ತಿದ್ದಾಗ ಐವರು ವ್ಯಕ್ತಿಗಳು ಮಹಿಳೆಯನ್ನು ಚುಡಾಯಿಸಲು ಆರಂಭಿಸಿದರು. ಇವರಿಂದ ತಪ್ಪಿಸಿಕೊಳ್ಳಲು ಮಹಿಳೆ ಮತ್ತು ಆಕೆಯ ಸ್ನೇಹಿತ ಸೈಕಲ್ ರಿಕ್ಷಾ ಏರಿದರು. ಆಗ ಚುಡಾಯಿಸುವ ತಂಡದವರು ಕೂಡ ಇವರನ್ನು ಹಿಂಬಾಲಿಸುತ್ತಾ ಅಶ್ಲೀಲ ಪದಗಳನ್ನು ಬಳಸಿ ಅವಹೇಳನ ಮಾಡತೊಡಗಿದರು.
ಆಗ ಮಹಿಳೆಗೆ ಇದ್ದಕ್ಕಿದ್ದಂತೆಯೇ ವಿಪರೀತ ಸಿಟ್ಟು ಬಂದು ಸೈಕಲ್ ರಿಕ್ಷಾದಿಂದ ಇಳಿದು ಚುಡಾಯಿಸುತ್ತಿದ್ದವರಲ್ಲಿ ಒಬ್ಟಾತನ ಕಾಲರ್ ಹಿಡಿದು ಕೆನ್ನೆಗೆ ಬಾರಿಸಿ ಆತನನ್ನು ದರದರನೆ ಪೊಲೀಸ್ ಠಾಣೆಗೆ ಎಳೆದೊಯ್ದಳು. ಇದನ್ನು ನೋಡುತ್ತಿದ್ದ ಜನರು ಸ್ತಂಭೀಭೂತರಾದರು.
ಮಹಿಳೆ ಕೊಟ್ಟ ದೂರಿನ ಪ್ರಕಾರ ಪೊಲೀಸರು ಆಕೆಯನ್ನು ಚುಡಾಯಿಸಿದವರ ಪೈಕಿ ಇನ್ನೂ ಇಬ್ಬರನ್ನು ಸೆರೆ ಹಿಡಿದರು.
ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಈಗ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.