ದಿಲ್ಲಿಯ ಪ್ರಗತಿ ಮೈದಾನ್ ಮೆಟ್ರೋ ಹೆಸರು ಇನ್ಮುಂದೆ “ಸುಪ್ರೀಂಕೋರ್ಟ್ ಮೆಟ್ರೋ ಸ್ಟೇಶನ್”
ಪ್ಲೈಓವರ್ ಹೆಸರನ್ನು ಕ್ಯಾಪ್ಟನ್ ವಿಕ್ರಮ್ ಬಾತ್ರಾ ಚೌಕ್ ಎಂದು ಮರುನಾಮಕರಣ
Team Udayavani, Dec 31, 2019, 6:39 PM IST
ನವದೆಹಲಿ: ದಿಲ್ಲಿಯ ಜನಪ್ರಿಯ ಪ್ರಗತಿ ಮೈದಾನ್ ಮೆಟ್ರೋ ನಿಲ್ದಾಣದ ಹೆಸರನ್ನು “ಸುಪ್ರೀಂಕೋರ್ಟ್ ಮೆಟ್ರೋ ನಿಲ್ದಾಣ” ಎಂದು ಮರುನಾಮಕರಣ ಮಾಡಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದಿಲ್ಲಿ ಸರ್ಕಾರ ಮಂಗಳವಾರ ಘೋಷಿಸಿದೆ.
ನೂತನ ಹೆಸರು ಬದಲಾವಣೆ ಮಾಡಲು ದಿಲ್ಲಿ ಮೆಟ್ರೋ ವ್ಯವಸ್ಥೆಯಲ್ಲಿ ಒಂದು ತಿಂಗಳ ಕಾಲಾವಕಾಶ ಬೇಕಾಗಲಿದೆ ಎಂದು ತಿಳಿಸಿದೆ. ಈ ವರದಿಯನ್ನು ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಖಚಿತಪಡಿಸಿದ್ದು, ಹೆಸರು ಬದಲಾವಣೆಗೆ ಹಲವಾರು ಮನವಿಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದೆ.
ಅಲ್ಲದೇ ದ ಮುಕಾರ್ಬಾ ಚೌಕ್ ಮತ್ತು ಪ್ಲೈಓವರ್ ಹೆಸರನ್ನು ಕ್ಯಾಪ್ಟನ್ ವಿಕ್ರಮ್ ಬಾತ್ರಾ ಚೌಕ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಹೇಳಿದರು. ಬಾತ್ರಾ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿದ್ದು, ಆ ಗೌರವಾರ್ಥ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಸೋಡಿಯಾ, ಹೆಸರು ಮರುನಾಮಕರಣ ಮತ್ತು ಮೆಟ್ರೋ ಟ್ರೈನ್ ಆಡಿಯೋ ಅನೌನ್ಸ್ ಮೆಂಟ್ ನ ಎಲ್ಲಾ ಪ್ರಕ್ರಿಯೆಗಳು ಒಂದು ತಿಂಗಳೊಳಗೆ ಮುಕ್ತಾಯಗೊಳ್ಳಲಿದೆ ಎಂದರು. ಅದೇ ರೀತಿ ಬಾದ್ರಾಪುರ್-ಮೆಹ್ರೂಲಿ ರಸ್ತೆಯ ಹೆಸರನ್ನು ಮರುನಾಮಕರಣ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.