ಡೆಲ್ಟಾ ತಂದ ಸಂಕಷ್ಟ
Team Udayavani, Aug 4, 2021, 7:30 AM IST
ಹೊಸದಿಲ್ಲಿ: ದೇಶದ ಸೀಮಿತ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಡೆಲ್ಟಾ ರೂಪಾಂತರಿಯೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
12 ರಾಜ್ಯಗಳ 44 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚಿದೆ. ಕಳೆದ 4 ವಾರಗಳಲ್ಲಿ ದೇಶದ 18 ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದ್ದು, ಹೊಸ ಪ್ರಕರಣಗಳ ಪೈಕಿ ಶೇ.47.5ರಷ್ಟು ಕೇಸುಗಳು ಈ ಜಿಲ್ಲೆಗಳಿಗೆ ಸೀಮಿತವಾಗಿವೆ. ಇವುಗಳಲ್ಲಿ 10 ಜಿಲ್ಲೆಗಳು ಕೇರಳದ್ದಾಗಿದ್ದರೆ, ಮಹಾರಾಷ್ಟ್ರದ 3 ಮತ್ತು ಉಳಿದವು ಈಶಾನ್ಯ ರಾಜ್ಯಗಳ ಜಿಲ್ಲೆಗಳು ಎಂದೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಸೋಮವಾರದಿಂದ ಮಂಗಳವಾರಕ್ಕೆ 30,549 ಮಂದಿಗೆ ಸೋಂಕು ದೃಢಪಟ್ಟಿದ್ದು, 422 ಮಂದಿ ಸಾವಿಗೀಡಾಗಿದ್ದಾರೆ. 6 ದಿನಗಳ ಬಳಿಕ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.
ಈ ನಡುವೆ, ಡಿಸೆಂಬರ್ ವೇಳೆಗೆ ಕೊವಿಶೀಲ್ಡ್ ಲಸಿಕೆ ಉತ್ಪಾದನೆಯ ಸಾಮರ್ಥ್ಯವನ್ನು ಮಾಸಿಕ 12 ಕೋಟಿ ಡೋಸ್ ಹಾಗೂ ಕೊವ್ಯಾಕ್ಸಿನ್ ಉತ್ಪಾದನ ಸಾಮರ್ಥ್ಯವನ್ನು 5.80 ಕೋಟಿ ಡೋಸ್‌ಗೆ ಏರಿಸಲಾಗುತ್ತದೆ ಎಂದು ಕೇಂದ್ರ ಸರಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
ಇನ್ನೂ 4 ಕಂಪೆನಿಗಳಲ್ಲಿ ಲಸಿಕೆ ಉತ್ಪಾದನೆ :
ಅಕ್ಟೋಬರ್-ನವೆಂಬರ್ ವೇಳೆಗೆ ಇನ್ನೂ 4 ಫಾರ್ಮಾ ಕಂಪೆನಿಗಳು ಲಸಿಕೆ ಉತ್ಪಾದನೆ ಆರಂಭಿಸಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯಾ ಮಾಹಿತಿ ನೀಡಿದ್ದಾರೆ. ಈಗಾಗಲೇ ದೇಶದಲ್ಲಿ 47 ಕೋಟಿ ಡೋಸ್ ಲಸಿಕೆ ವಿತರಣೆ ಮುಗಿದಿದೆ. ಮುಂದಿನ ದಿನಗಳಲ್ಲಿ ಬಯಾಲಾಜಿಕಲ್ ಇ , ನೋವರ್ಟಿಸ್ ಲಸಿಕೆ ಯೂ ದೇಶದಲ್ಲಿ ಲಭ್ಯವಾಗಲಿವೆ. ಝೈಡಸ್ ಕ್ಯಾಡಿಲ್ಲಾಗೂ ತುರ್ತು ಬಳಕೆಗೆ ಅನುಮತಿ ನೀಡಲಾಗುತ್ತದೆ ಎಂದಿದ್ದಾರೆ.
ವುಹಾನ್‌ನಲ್ಲಿ ಅಬ್ಬರ :
ಕೊರೊನಾ ಜನ್ಮಸ್ಥಾನ ಚೀನದ ವುಹಾನ್‌ನಲ್ಲಿ ಮತ್ತೆ ಸೋಂಕು ಅಬ್ಬರಿ ಸಲಾರಂಭಿಸಿದೆ. ದಿನೇ ದಿನೆ ಪ್ರಕರಣ ಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಮೂಹಿಕ ಪರೀಕ್ಷೆಗೆ ಚೀನ ಸರಕಾರ ಮುಂದಾಗಿದೆ. ವುಹಾನ್‌ನ ಎಲ್ಲ 1.10 ಕೋಟಿ ಮಂದಿ ಯನ್ನೂ ಪರೀಕ್ಷೆಗೆ ಒಳಪಡಿಸಲು ನಿರ್ಧ ರಿಸಲಾಗಿದೆ. ಇದೇ ವೇಳೆ, ಜರ್ಮನಿಯಲ್ಲಿ 12 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿ ಗೂ ಲಸಿಕೆ ವಿತರಣೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.