Democracy ಎಂದರೆ ಕೇವಲ ಕಟ್ಟಡಗಳಲ್ಲ…: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ
ಬಿಜೆಪಿ-ಆರ್‌ಎಸ್‌ಎಸ್ ಮೂರು ಸುಳ್ಳುಗಳು ದೇಶದ ಮುಂದೆ ಬಯಲಾಗಿವೆ
Team Udayavani, May 28, 2023, 5:24 PM IST
ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಅದು ಜನರ ಧ್ವನಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.
ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಸಂಸತ್ತಿನತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಬಲವಂತವಾಗಿ ತಡೆದು ವಶಕ್ಕೆ ಪಡೆದಿರುವ ಮತ್ತು ಮಾರಾಮಾರಿ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
“ನೂತನ ಸಂಸತ್ತಿನ ಉದ್ಘಾಟನೆಯ ಹಕ್ಕನ್ನು ರಾಷ್ಟ್ರಪತಿಯಿಂದ ಕಿತ್ತುಕೊಳ್ಳಲಾಗಿದೆ. ಸರ್ವಾಧಿಕಾರದ ಬಲದಿಂದ ಮಹಿಳಾ ಆಟಗಾರ್ತಿಯರನ್ನು ಬೀದಿಗಳಲ್ಲಿ ಥಳಿಸಲಾಗಿದೆ ಎಂದು ಖರ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
“ಬಿಜೆಪಿ-ಆರ್‌ಎಸ್‌ಎಸ್ ಆಡಳಿತಗಾರರ ಮೂರು ಸುಳ್ಳುಗಳು, ಪ್ರಜಾಪ್ರಭುತ್ವ, ರಾಷ್ಟ್ರೀಯತೆ ಮತ್ತು ಬೇಟಿ ಬಚಾವೋ ಈಗ ದೇಶದ ಮುಂದೆ ಬಯಲಾಗಿವೆ . ಮೋದಿ ಜಿ ನೆನಪಿರಲಿ, ಪ್ರಜಾಪ್ರಭುತ್ವವು ಕೇವಲ ಕಟ್ಟಡಗಳಲ್ಲ, ಆದರೆ ಸಾರ್ವಜನಿಕರ ಧ್ವನಿಯೊಂದಿಗೆ ಕಾರ್ಯನಿರ್ವಹಿಸುತ್ತದೆ” ಎಂದು ಖರ್ಗೆ ಹೇಳಿದ್ದಾರೆ.
ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಮತ್ತು ದೆಹಲಿ ಪೊಲೀಸರ ನಡುವೆ ಮಾರಾಮಾರಿ ನಡೆದ ನಂತರ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರನ್ನು ಇತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.