Poonch ನಲ್ಲಿ ಯೋಧರ ಹತ್ಯೆ: ಈದ್‌ ಆಚರಿಸದ ಗ್ರಾಮಸ್ಥರು! ಉಗ್ರರ ಪತ್ತೆಗಾಗಿ ತೀವ್ರ ಶೋಧ

ಉಗ್ರರ ಶೋಧ ಕಾರ್ಯಾಚರಣೆಗೆ 2,000 ಕಮಾಂಡೋಗಳ ನಿಯೋಜನೆ

Team Udayavani, Apr 23, 2023, 8:10 AM IST

ಪೂಂಛ್ ನಲ್ಲಿ ಯೋಧರ ಹತ್ಯೆ: ಈದ್‌ ಆಚರಿಸದ ಗ್ರಾಮಸ್ಥರು!

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಸಂಗೀಯೋತೆ ಗ್ರಾಮದಲ್ಲಿ ಈದುಲ್‌ ಫಿತ್ರ ಹಬ್ಬದಾಚರಣೆ ನಡೆಯಲಿಲ್ಲ. ಇತ್ತೀಚೆಗಷ್ಟೇ ಉಗ್ರರ ದಾಳಿಯಿಂದ ಐವರು ಭಾರತೀಯ ಯೋಧರು ಮೃತಪಟ್ಟ ಹಿನ್ನೆಲೆಯಲ್ಲಿ ಶನಿವಾರ ಗ್ರಾಮಸ್ಥರು ಈ ನಿರ್ಧಾರ ಮಾಡಿದ್ದರು.

“ನಮ್ಮ ಗ್ರಾಮದಲ್ಲಿ ನಿಯೋಜಿತರಾಗಿದ್ದ ರಾಷ್ಟ್ರೀಯ ರೈಫ‌ಲ್ಸ್‌ ಘಟಕಕ್ಕೆ ಸೇರಿದ ಯೋಧರು ಅಸುನೀಗಿದ ಹಿನ್ನೆಲೆಯಲ್ಲಿ ಶನಿವಾರ ಈದ್‌ ಆಚರಿಸದೇ ಇರಲು ನಾವು ಸೇರಿ ತೀರ್ಮಾನಿಸಿದೆವು.

ಕೇವಲ ನಮಾಜ್‌ ಮಾತ್ರ ಮಾಡಿದೆವು. ಮೃತ ಯೋಧರ ಕುಟುಂಬಕ್ಕೆ ನಮ್ಮ ಸಂತಾಪಗಳು’ ಎಂದು ಸಂಗೀಯೋತೆ ಪಂಚಾಯತ್‌ನ ಸರಪಂಚ ಮುಖೀ¤ಯಾಜ್‌ ಖಾನ್‌ ಹೇಳಿದರು.

ಗುರುವಾರ ಸಂಜೆ 7 ಗಂಟೆಗೆ ಸಂಗೀಯೋತೆ ಗ್ರಾಮದಲ್ಲಿ ರಾಷ್ಟ್ರೀಯ ರೈಫ‌ಲ್ಸ್‌ನಿಂದ ಇಫ್ತಾರ್‌ ಕೂಟ ಆಯೋಜಿಸಲಾಗಿತ್ತು. ಇದಕ್ಕಾಗಿ ರಾಷ್ಟ್ರೀಯ ರೈಫ‌ಲ್ಸ್‌ನ ಪ್ರಧಾನ ಕಚೇರಿ ಬಾಲಾಕೋಟ್‌ನ ಬಸೂನಿಯಿಂದ ಹಣ್ಣುಗಳು ಸೇರಿದಂತೆ ಆಹಾರ ಸಾಮಗ್ರಿಗಳನ್ನು ಸೇನಾ ಟ್ರಕ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಭಾರಿ ಮಳೆಯಿತ್ತು, ಬೆಳಕೂ ಕಡಿಮೆಯಿತ್ತು. ಮಾರ್ಗಮಧ್ಯೆ ಏಳು ಮಂದಿ ಉಗ್ರರು ಟ್ರಕ್‌ ಮೇಲೆ ದಾಳಿ ನಡೆಸಿದರು. ಈ ವೇಳೆ ಸ್ಥಳದಲ್ಲಿ ಐವರು ಯೋಧರು ಅಸುನೀಗಿದರು. ಒಬ್ಬ ಯೋಧನಿಗೆ ತೀವ್ರವಾಗಿ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಗ್ರರು ಸ್ಟೀಲ್‌ ಬುಲೆಟ್‌ಗಳನ್ನು ಬಳಸಿರುವುದು ಕಂಡುಬಂದಿದೆ.

ಉಗ್ರರ ಪತ್ತೆಗಾಗಿ ತೀವ್ರ ಶೋಧ: ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಮತ್ತು ಅರೆಸೇನಾ ಪಡೆಯು ಘಟನೆ ನಡೆದ ಪ್ರದೇಶದ ಸುತ್ತಮುತ್ತ ಉಗ್ರರ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ಕೈಗೊಂಡಿದೆ. ಶೋಧ ಕಾರ್ಯಕ್ಕಾಗಿ ಸುಮಾರು 2,000 ಕಮಾಂಡೋಗಳನ್ನು ನಿಯೋಜಿಸಲಾಗಿದೆ. ದಾಳಿಗೆ ಸಂಬಂಧಿಸಿದಂತೆ ಗುಪ್ತಚರ ದಳವು (ಐಬಿ) ಕೇಂದ್ರ ಗೃಹ ಸಚಿವಾಲಯ ಮತ್ತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದೊಂದಿಗೆ ವರದಿಯನ್ನು ಹಂಚಿಕೊಂಡಿದೆ ಎಂದು ರಕ್ಷಣ ಮೂಲಗಳು ತಿಳಿಸಿವೆ.

ಡ್ರೋನ್‌ಗಳ ಬಳಕೆ: ಉಗ್ರರ ಪತ್ತೆಗಾಗಿ ಡ್ರೋನ್‌ಗಳು, ಕುಶಾಗ್ರ ನಾಯಿಗಳನ್ನು ಬಳಸಲಾಗುತ್ತಿದೆ. ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ವಿಚಾರಣೆಗಾಗಿ ಇದುವರೆಗೂ 14 ಮಂದಿಯನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೋಧರ ಅಂತ್ಯಕ್ರಿಯೆ: ದಾಳಿಯಲ್ಲಿ ಹುತಾತ್ಮರಾದ ಪಂಜಾಬ್‌ನ ನಾಲ್ವರು ಯೋಧರಾದ ಹವಲ್ದಾರ್‌ ಮನ್‌ದೀಪ್‌ ಸಿಂಗ್‌, ಲ್ಯಾನ್ಸ್‌ ನಾಯಕ್‌ ಕುಲವಂತ್‌ ಸಿಂಗ್‌, ಸಿಪಾಯಿ ಹರಿಕೃಷ್ಣ ಸಿಂಗ್‌ ಮತ್ತು ಸಿಪಾಯಿ ಸೇವಕ್‌ ಸಿಂಗ್‌ ಹಾಗೂ ಒಡಿಶಾದ ಲ್ಯಾನ್ಸ್‌ ನಾಯಕ್‌ ದೇಬಶಿಶ್‌ ಬಸ್ವಾಲ್‌ ಅವರ ಅಂತ್ಯಕ್ರಿಯೆಯು ಸಕಲ ಮಿಲಿಟರಿ ಗೌರವಗಳೊಂದಿಗೆ ಅವರ ಹುಟ್ಟೂರಿನಲ್ಲಿ ಶನಿವಾರ ನೆರವೇರಿತು. ಪಂಜಾಬ್‌ ಸರಕಾರ ಮಡಿದ ಯೋಧರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ.

ದೇಶದ ಎಲ್ಲ ಮುಸ್ಲಿಮರಿಗೆ ರಮ್ಜಾನ್‌ ಹಬ್ಬದ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವ ಹೆಚ್ಚಲಿ. ಪ್ರತಿಯೊಬ್ಬರ ಆರೋಗ್ಯ ಮತ್ತು ಯೋಗ ಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.