ಬ್ಯಾಂಕ್ ಖಾತೆಗಳ ಪೋರ್ಟೆಬಿಲಿಟಿಗೆ ಚಿಂತನೆ
Team Udayavani, Jun 1, 2017, 2:25 AM IST
ಹೊಸದಿಲ್ಲಿ: ಮೊಬೈಲ್ ನಂಬರ್ ಪೋರ್ಟೆಬಿಲಿಟಿ ರೀತಿಯಲ್ಲೇ ದೇಶಾದ್ಯಂತ ಬ್ಯಾಂಕ್ ಅಕೌಂಟ್ ಪೋರ್ಟೆಬಿಲಿಟಿ ವ್ಯವಸ್ಥೆ ಜಾರಿಗೆ ಬರಲಿದೆ. ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಉಪ ಗವರ್ನರ್ ಎಸ್.ಎಸ್.ಮುಂದ್ರಾ ಅವರು ಸುಳಿವು ನೀಡಿದ್ದು, ‘ಗ್ರಾಹಕರ ಅನುಕೂಲದ ದೃಷ್ಟಿಯಿಂದ ಬ್ಯಾಂಕ್ ಖಾತೆ ಸಂಖ್ಯೆಗಳ ಪೋರ್ಟೆಬಲಿಟಿಗೆ ದೇಶದ ಬ್ಯಾಂಕಿಂಗ್ ಕ್ಷೇತ್ರ ಸಜ್ಜಾಗಬೇಕಿದೆ,’ ಎಂದು ಬ್ಯಾಂಕ್‌ಗಳಿಗೆ ಸಲಹೆ ನೀಡಿದ್ದಾರೆ. ಒಂದೊಮ್ಮೆ ಬ್ಯಾಂಕ್ ಖಾತೆಗಳ ಪೋರ್ಟೆಬಲಿಟಿ ವ್ಯವಸ್ಥೆ ಜಾರಿಯಾದರೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನಾರೋಗ್ಯಕರ ಸ್ಪರ್ಧೆ ಏರ್ಪಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
‘ಖಾತೆಗಳನ್ನು ಪೋರ್ಟ್ ಮಾಡುವ ಪ್ರಕ್ರಿಯೆಯಲ್ಲಿ ಡಿಜಿಟಲ್ ಬ್ಯಾಂಕಿಂಗ್ ಮಹತ್ವದ ಪಾತ್ರ ನಿರ್ವಹಿಸಲಿದೆ. ಇದರೊಂದಿಗೆ ಭೀಮ್, ಐಎಂಪಿಎಸ್, ಯುಪಿಐ ರೀತಿಯ ವಿಶಿಷ್ಟ ಆ್ಯಪ್‌ಗ್ಳು ಪೋರ್ಟೆಬಲಿಟಿ ಪರಿಕಲ್ಪನೆಯನ್ನು ವಾಸ್ತವಕ್ಕೆ ತರುವ ನಿಟ್ಟಿನಲ್ಲಿ ನೆರವಾಗಲಿವೆ,’ ಎಂದಿದ್ದಾರೆ ಮುಂದ್ರಾ. ಇತ್ತೀಚೆಗೆ ಬ್ಯಾಂಕು ಖಾತೆಗಳಿಗೆ ಎಲ್ಲ ಗ್ರಾಹಕರ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುತ್ತಿರುವ ಕಾರಣ, ಗ್ರಾಹಕರು ಸುಲಭವಾಗಿ ಖಾತೆಗಳನ್ನು ಬದಲಿಸದೆಯೇ ತಮ್ಮ ಬ್ಯಾಂಕುಗಳನ್ನು ಬದಲಿಸಿಕೊಳ್ಳಬಹುದು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.