Thane ನಕಲಿ ಕರೆನ್ಸಿ ಪ್ರಕರಣ; ಉಗ್ರ’ಅಂಕಲ್’ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್
ದೇಶದ ವಿತ್ತೀಯ ಸ್ಥಿರತೆಗೆ ಹಾನಿ ಮಾಡುವ ಉದ್ದೇಶ !!
Team Udayavani, Sep 28, 2023, 4:00 PM IST
ಹೊಸದಿಲ್ಲಿ: ದೇಶದ ವಿತ್ತೀಯ ಸ್ಥಿರತೆಗೆ ಹಾನಿ ಮಾಡುವ ಉದ್ದೇಶದಿಂದ ಉಗ್ರ ‘ಅಂಕಲ್’ ಅಲಿಯಾಸ್ ಜಾವೇದ್ ಪಟೇಲ್ ಉತ್ತಮ ಗುಣಮಟ್ಟದ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು (ಎಫ್‌ಐಸಿಎನ್) ಹೊಂದುವ ಮತ್ತು ಚಲಾವಣೆ ಮಾಡುವ ಮೂಲಕ ತನ್ನ ಸಹಚರರ ಮೂಲಕ ಭಯೋತ್ಪಾದಕ ಕೃತ್ಯಗಳನ್ನು ಎಸಗಿದ್ದಾನೆ ಎಂದು ಎನ್ ಐಎ ಪೂರಕ ಚಾರ್ಜ್ ಶೀಟ್ ದಾಖಲಿಸಿದೆ.
ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬುಧವಾರ ಮುಂಬೈನ ವಿಶೇಷ ನ್ಯಾಯಾಲಯದಲ್ಲಿ ಜಾವೇದ್ ಪಟೇಲ್ ಸೇರಿ ನಾಲ್ವರ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾದವರು ಅಂಕಲ್ ಅಲಿಯಾಸ್ “ಜಾವೇದ್ ಪಟೇಲ್(ಜಾವೇದ್ ಚಿಕ್ನಾ) ಸೇರಿ ರಿಯಾಜ್ ಶಿಕಿಲ್ಕರ್, ಮೊಹಮ್ಮದ್ ಫಯಾಜ್ ಶಿಕಿಲ್ಕರ್ ಮತ್ತು ನಾಸಿರ್ ಚೌಧರಿ ಎಂದು ಗುರುತಿಸಲಾಗಿದೆ, ಎಲ್ಲರೂ ಮುಂಬೈ ನಿವಾಸಿಗಳು ಎಂದು ಫೆಡರಲ್ ಏಜೆನ್ಸಿಯ ವಕ್ತಾರರು ತಿಳಿಸಿದ್ದಾರೆ. ಫಯಾಜ್ ಶಿಕಿಲ್ಕರ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಥಾಣೆ ಪೊಲೀಸರು ಕಳೆದ ವರ್ಷ ಎಪ್ರಿಲ್ ನಲ್ಲಿ ರಿಯಾಜ್ ಶಿಕಿಲ್ಕರ್ ನಿಂದ 2,000 ರೂ. ಮುಖಬೆಲೆಯ 149 ಉತ್ತಮ ಗುಣಮಟ್ಟದ ನಕಲಿ ಭಾರತೀಯ ನೋಟುಗಳನ್ನು ವಶಪಡಿಸಿಕೊಂಡ ನಂತರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಚಾರ್ಜ್‌ಶೀಟ್ ಮಾಡಿದ್ದರು. ನಂತರ ಎನ್‌ಐಎ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ತನಿಖೆಯ ನಂತರ, ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಕ್ಕಾಗಿ ಫಯಾಜ್ ನನ್ನ ಮೇ ತಿಂಗಳಲ್ಲಿ ಬಂಧಿಸಲಾಗಿತ್ತು ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.