ದೇವೇಗೌಡರೇ ಲಾಲುರನ್ನು ಮೇವು ಹಗರಣದಲ್ಲಿ ಸಿಲುಕಿಸಿದ್ದು: ಮಿಶ್ರಾ
Team Udayavani, Dec 28, 2017, 7:05 AM IST
ಪಾಟ್ನಾ: “ಮಾಜಿ ಪ್ರಧಾನಿ ದೇವೇಗೌಡರೇ ಮೇವು ಹಗರಣದಲ್ಲಿ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ರನ್ನು ಸಿಲುಕಿಸಿದ್ದು’. ಹೀಗೆಂದು ಆರೋಪ ಮಾಡಿದ್ದು ಕಾಂಗ್ರೆಸ್ ನಾಯಕ ಡಾ.ಜಗನ್ನಾಥ್ ಮಿಶ್ರಾ. ಈ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದೂ ಅವರು ಹೇಳಿದ್ದಾರೆ.
ಬುಧವಾರ ಪಾಟ್ನಾದಲ್ಲಿ ಮಾತನಾಡಿದ ಅವರು ಮೇವು ಹಗರಣ ಬೆಳಕಿಗೆ ಬಂದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುವ ಸಂದರ್ಭದಲ್ಲಿ ಎಚ್.ಡಿ.ದೇವೇಗೌಡ ಮತ್ತು ಐ.ಕೆ.ಗುಜ್ರಾಲ್ ಪ್ರಧಾನಮಂತ್ರಿ ಗಳಾಗಿದ್ದರು. ಹೀಗಾಗಿ ಲಾಲು ಮತ್ತು ಅವರ ಕುಟುಂಬ ಸದಸ್ಯರು ಈ ಬಗ್ಗೆ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡು ತ್ತಿರುವುದು ಸರಿಯಲ್ಲ ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದಿ.ಸೀತಾರಾಮ್ ಕೇಸರಿ ಅವರ ಒತ್ತಾಸೆಯ ಮೇರೆಗೆ ಹಗರಣದಲ್ಲಿ ತಮ್ಮ ಹೆಸರನ್ನೂ ಸೇರಿಸಲಾಯಿತು ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ದಶಕ ಗಳ ಹಿಂದಿನ ಬಹುಕೋಟಿ ಹಗರಣಕ್ಕೆ ಹೊಸತೊಂದು ಟ್ವಿಸ್ಟ್ ಸಿಕ್ಕಿದಂತಾಗಿದೆ. ರಾಂಚಿಯಲ್ಲಿರುವ ಸಿಬಿಐನ ವಿಶೇಷ ಕೋರ್ಟ್ ಆರ್ಜೆಡಿ ನಾಯಕನನ್ನು ತಪ್ಪಿತಸ್ಥ ಎಂದು ಪರಿಗಣಿಸಿದ್ದರಿಂದ ಅವರು ಈಗ ಕಾರಾಗೃಹದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.