Aolar power; 90 ದಿನ ಹಾರಬಲ್ಲ ಸೌರಶಕ್ತಿ ಚಾಲಿತ ವಿಮಾನ ಅಭಿವೃದ್ಧಿ!
Team Udayavani, Sep 16, 2024, 6:50 AM IST
ಹೊಸದಿಲ್ಲಿ: ಭಾರತದ ವಿಜ್ಞಾನಿಗಳು ಸೌರಶಕ್ತಿ ಚಾಲಿತ ವಿಮಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಒಮ್ಮೆಗೆ 90 ದಿನಗಳವರೆಗೆ ಹಾರುವ ಸಾಮರ್ಥ್ಯವನ್ನು ಹೊಂದಿದ್ದು, ಇದರ ಸಣ್ಣ ಆವೃತ್ತಿಯು ಈಗಾಗಲೇ 10 ಗಂಟೆಗಳ ಕಾಲ ಯಶಸ್ವಿಯಾಗಿ ಹಾರಾಟವನ್ನು ನಡೆಸಿದೆ.
ಬಾಹ್ಯಾಕಾಶದ ಅತ್ಯಂತ ಎತ್ತರದ ಪ್ರದೇಶದಲ್ಲಿ (ಹೈ ಆಲ್ಟಿಟ್ಯೂಡ್ ಪ್ಲಾಟ್‌ಫಾರ್ಮ್ -ಎಚ್‌ಎಪಿ) ಹಾರಾಟ ನಡೆಸುವ ಇಂಥದ್ದೊಂದು ಮಾನವ ರಹಿತ ವಿಮಾನವನ್ನು ಬೆಂಗಳೂರಿನ ನ್ಯಾಶನಲ್ ಏರೋಸ್ಪೇಸ್ ಲ್ಯಾಬೊ ರೇಟರೀಸ್ ನಿರ್ಮಿಸಿದೆ. ಈ ವಿಮಾನವು 17-20 ಕಿ.ಮೀ. ಎತ್ತರದಲ್ಲಿ ಹಗಲು ಮತ್ತು ರಾತ್ರಿ ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಇಂಥ ಹೈ-ಆಲ್ಟಿಟ್ಯೂಡ್ ಪ್ಲಾಟ್ ಫಾರ್ಮ್ ರಚಿಸಿದ ಏಕೈಕ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ವಿಮಾನ ಡ್ರೋನ್‌ಗಳನ್ನು ಹೋಲು ತ್ತವೆ. ಅವುಗಳನ್ನು ಗುಪ್ತಚರ, ಕಣ್ಗಾ ವಲು, ಬೇಹುಗಾರಿಕೆ ಸೇರಿ 5 ಜಿ ತರಂಗಗಳ ಪ್ರಸಾರದವರೆಗೆ ಹಲವಾರು ಉದ್ದೇಶಗಳಿಗಾಗಿ ಬಳಸಬಹುದು. ಇತ್ತೀಚೆಗೆ ನಡೆದ ಇಂಡಿಯಾ ಡಿಫೆನ್ಸ್ ಏವಿಯೇಶನ್ ಎಕ್‌ನ್ಪೋದಲ್ಲಿ ಇದರ ಪ್ರದರ್ಶನ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.