‘ಆ್ಯಪಲ್ ಮ್ಯಾಕ್’ಗೆ ನಿಷೇಧ
Team Udayavani, Aug 27, 2019, 5:01 AM IST
ನವದೆಹಲಿ: 2015ರ ಸೆಪ್ಟೆಂಬರ್‌ನಿಂದ 2017ರ ಫೆಬ್ರವರಿವರೆಗಿನ ಅವಧಿಯಲ್ಲಿ ಮಾರಾಟವಾಗಿರುವ 15 ಇಂಚು ಪರದೆಯುಳ್ಳ ‘ಆ್ಯಪಲ್ ಮ್ಯಾಕ್‌ಬುಕ್ ಪ್ರೋ’ ಲ್ಯಾಪ್‌ಟಾಪ್‌ಗ್ಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಆ ಮಾದರಿಯ ಲ್ಯಾಪ್‌ಟಾಪ್‌ಗ್ಳನ್ನು ವಿಮಾನದೊಳಗೆ ತರುವುದನ್ನು ನಿಷೇಧಿಸಿ ನಾಗರಿಕ ವಿಮಾನ ಸೇವೆಗಳ ಮಹಾ ನಿರ್ದೇಶನಾಲಯ (ಡಿಜಿಸಿಎ) ಆದೇಶ ಹೊರಡಿಸಿದೆ. ‘ಆ್ಯಪಲ್ ಮ್ಯಾಕ್‌ಬುಕ್ ಪ್ರೋ ಲ್ಯಾಪ್‌ಟಾಪ್‌ಗ್ಳಲ್ಲಿ ಬ್ಯಾಟರಿಗಳು ಅಧಿಕವಾಗಿ ಶಾಖಕ್ಕೊಳಗಾಗಿ, ಸ್ಫೋಟವಾಗುವ ಸಾಧ್ಯತೆಗಳು ಕಂಡುಬಂದಿರುವುದರಿಂದ ಆ ಲ್ಯಾಪ್‌ಟಾಪ್‌ಗ್ಳನ್ನು ಬಳಸಕೂಡದೆಂದು ಆ್ಯಪಲ್ ಕಂಪನಿಯೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ವಿಮಾನದೊಳಗೆ ಚೆಕ್-ಇನ್ ಲಗೇಜಿನ ಜತೆಗಾಗಲಿ, ಹ್ಯಾಂಡ್‌ಬ್ಯಾಗ್‌ಗಳ ಮೂಲಕವಾಗಲೀ ಕೊಂಡೊಯ್ಯುವಂತಿಲ್ಲ’ ಎಂದು ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್, ಸೋಮವಾರ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.