ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

Team Udayavani, Dec 11, 2024, 11:27 PM IST

ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

ನವದೆಹಲಿ: ರಾಜ್ಯಸಭೆಯಲ್ಲಿ ಸುಗಮವಾಗಿ ಕಲಾಪ ನಡೆಸಲು ಸಭಾಧ್ಯಕ್ಷ ಜಗದೀಪ್‌ ಧನ್‌ಕರ್‌ ಅವರೇ ದೊಡ್ಡ ಅಡ್ಡಿ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆರೋಪಿಸಿದ್ದಾರೆ.

ಉಪರಾಷ್ಟ್ರಪತಿ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್‌ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮ­ಗಳ ಜತೆ ಮಾತನಾಡಿದ ಅವರು, ಧನ್‌ಕರ್‌ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಅವರು ನಡೆದುಕೊಳ್ಳುತ್ತಿ­ರುವ ರೀತಿಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಧನ್‌ಕರ್‌ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಪಕ್ಷಪಾತ ಮಾಡುವ ಮೂಲಕ ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಹೀಗಾಗಿಯೇ ಅವರ ವಿರುದ್ಧ ನಾವು ಅವಿಶ್ವಾಸ ಗೊತ್ತುವಳಿ ಮಂಡಿಸಲು ತೀರ್ಮಾನಿಸಿ, ನೋಟಿಸ್‌ ನೀಡಿದ್ದೇವೆ. ಈ ವಿಷಯದಲ್ಲಿ ವಿಪಕ್ಷಗಳು ಒಟ್ಟಾಗಿ ಇರಲಿವೆ. ಪ್ರತಿ ಬಾರಿ ಆಡಳಿತ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುವ ಕೆಲಸದಲ್ಲೇ ಧನಕರ್‌ ಅವರು ತೊಡಗಿದ್ದರು ಎಂದಿದ್ದಾರೆ.

ಧನ್‌ಕರ್‌ ಒಬ್ಬ ಹೆಡ್‌ಮಾಸ್ಟರ್‌: ಮುಖ್ಯೋಪಧ್ಯಾಯರೊಬ್ಬರು ಶಾಲೆಯನ್ನು ನಿಯಂತ್ರಿಸುವಂತೆ ರಾಜ್ಯಸಭೆಯನ್ನು ನಿಯಂತ್ರಿಸಲು ಧನ್‌ಕರ್‌ ಅವರು ಪ್ರಯತ್ನಿಸುತ್ತಾರೆ. ಹೀಗಾಗಿ ವಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ಕೊಡದೆ ಅವಮಾನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ರಾಜಕೀಯವಿಲ್ಲ: ಯಾವುದೇ ರಾಜಕೀಯ ದುರುದ್ದೇಶದಿಂದ ನಾವು ಧನ್‌ಕರ್‌ ಅವರ ವಿರುದ್ಧ ಈ ಗೊತ್ತುವಳಿಯನ್ನು ಮಂಡಿಸಿಲ್ಲ. ರಾಜ್ಯಸಭೆಯಲ್ಲಿ ಅವರು ನಡೆದುಕೊಳ್ಳುತ್ತಿದ್ದ ರೀತಿಯಿಂದ ನಾವು ರೋಸಿಹೋಗಿದ್ದೆವು. ಧನಕರ್‌ ಅವರ ನಡೆ ಕೇವಲ ನಿಯಮ ಮೀರಿ­ದ್ದಷ್ಟೇ ಅಲ್ಲ. ಅದು ಸಂವಿಧಾನದ ಉಲ್ಲಂಘನೆಯೂ ಆಗಿದೆ. ಹೀಗಾಗಿ ಜನರು ಕಾಂಗ್ರೆಸ್‌ನ ನಡೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಖರ್ಗೆ ಹೇಳಿದ್ದಾರೆ.

ಸೋರೋಸ್‌ ಪ್ರಕರಣ ಮುಚ್ಚಲು ಈ ನಡೆ: ಬಿಜೆಪಿ
ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್‌ಕರ್‌ಗೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ಜಾಟ್‌ ಸಮುದಾಯಕ್ಕೆ ಅವಮಾನ ಮಾಡುತ್ತಿವೆ. ಅಮೆರಿಕ-ಹಂಗೆರಿ ಮೂಲದ ಉದ್ಯಮಿ ಜಾರ್ಜ್‌ ಸೊರೊಸ್‌ ಕಂಪನಿಯ ಜತೆ ಗಾಂಧಿ ಕುಟುಂಬಕ್ಕಿರುವ ಸಂಬಂಧದ ಆರೋಪವನ್ನು ಮುಚ್ಚಿಹಾಕಲು ಈ ನಡೆಯನ್ನು ಕಾಂಗ್ರೆಸ್‌ ಅನುಸರಿಸುತ್ತಿದೆ ಎಂದು ಬಿಜೆಪಿ ಹೇಳಿದೆ.

ಟಾಪ್ ನ್ಯೂಸ್

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

20-uv-fusion

UV Fusion: ಪ್ರತೀ ಕ್ಷಣವೂ ಜೀವಿಸುವುದನ್ನು ಕಲಿ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.