ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ಅಧಿಕಾರ ಸ್ವೀಕಾರ
Team Udayavani, Jul 8, 2021, 4:48 PM IST
ನವ ದೆಹಲಿ : ನಿನ್ನೆಯಷ್ಟೇ ಮೋದಿ ನೇತೃತ್ವದ ಸಂಪುಟ ಪುನರ್ ರಚನೆಯಲ್ಲಿ ನೂತನ ಖಾತೆಗೆ ಸಚಿವರಾಗಿ ಪ್ರಮಾಣ ವಚನ ಪಡೆದ ರಾಜ್ಯಸಭೆ ಸದಸ್ಯ ಧರ್ಮೇಂದ್ರ ಪ್ರಧಾನ್ ಇಂದು (ಗುರುವಾರ, ಜುಲೈ 8) ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಮಾತ್ರವಲ್ಲದೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ಕೂಡ ಪ್ರಧಾನ್ ನಿಭಾಯಿಸಲಿದ್ದಾರೆ.
ಇದನ್ನೂ ಓದಿ : ಶಾಸಕಿ ರೂಪಾಲಿ ನಾಯ್ಕ ಮೇಲಿನ ಪರ್ಸೆಂಟೇಜ್ ಆರೋಪ ನಿರಾಧಾರ: ಕಾರವಾರ ಬಿಜೆಪಿ
ಸಂಪುಟ ಪುನರ್ ರಚನೆ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದ ರಮೇಶ್ ಪೋಖ್ರಿಯಾಲ್ ಈ ಹಿಂದೆ ಶಿಕ್ಷಣ ಖಾತೆಯನ್ನು ನಿಭಾಯಿಸುತ್ತಿದ್ದರು. ಪ್ರಧಾನ್ ಹಿಂದಿನ ಸಚಿವ ಸಂಪುಟದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಉಕ್ಕು ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ನೂತನ ಸಚಿವ ಸಂಪುಟದಲ್ಲಿ ಪೆಟ್ರೋಲಿಯಂ ಖಾತೆಯನ್ನು ಹರ್ ದೀಪ್ ಸಿಂಗ್ ಪುರಿ ಅವರಿಗೆ ವಹಿಸಲಾಗಿದೆ.
52 ವರ್ಷ ಪ್ರಾಯದ ಧರ್ಮೇಂದ್ರ ಪ್ರಧಾನ್, 2018ರ ಏಪ್ರಿಲ್ ನಲ್ಲಿ ಗೆಲ್ಲುವ ಮೂಲಕ ರಾಜ್ಯಸಭೆಗೆ ಎರಡನೇ ಬಾರಿಗೆ ಆಯ್ಕೆಯಾಗಿದ್ದರು.
ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎರಡನೇ ಅವಧಿಗೆ 2019 ರ ಮೇ ತಿಂಗಳಲ್ಲಿ ರಚನೆಯಾದ ನಂತರದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ನಿನ್ನೆ (ಬುಧವಾರ, ಜುಲೈ 7 ) ರಾಷ್ಟ್ರಪತಿ ಭವನದಲ್ಲಿ ಕೋವಿಡ್-19 ಮಾರ್ಗಸೂಚಿಗೆ ಅನುಗುಣವಾಗಿ ಪ್ರಮಾನ ವಚನ ಸ್ವೀಕಾರ ಸಮಾರಂಭದಲ್ಲಿ ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.
ಇದನ್ನೂ ಓದಿ : #Change : ಇದು ಲಸಿಕೆಯ ಕೊರತೆ ಇಲ್ಲ ಎಂದರ್ಥವೇ ? : ಕೇಂದ್ರದ ವಿರುದ್ಧ ಗಾಂಧಿ ಟ್ವೀಟಾಸ್ತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.