ಹತಾಶಗೊಂಡ ದೀದಿ ಪ್ರತಿಪಕ್ಷಗಳ ನಾಯಕರ ಬೆಂಬಲ ಕೋರಿದ್ದಾರೆ : ಮೋದಿ
Team Udayavani, Apr 1, 2021, 6:18 PM IST
ಜಯ ನಗರ : ಪಶ್ಚಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆಯಾದ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹತಾಶರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಜಯನಗರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ದೀದಿಯವರಲ್ಲಿ ಹತಾಶೆ ಹೆಚ್ಚಿದೆ. ಹಾಗಾಗಿ ಅವರು ಇತರೆ ಪ್ರತಿ ಪಕ್ಷಗಳ ನಾಯಕರಿಗೆ ಪತ್ರ ಬರೆದು ಒಂದಾಗಬೇಕು ಎಂದು ಕೇಳಿಕೊಂಡಿದ್ದಾರೆ. ದೀದಿ ಅವರು ಹೊರಗಿನವರು ಎಂದು ಪರಿಗಣಿಸುವ ಮತ್ತು ಸಭೆಗೆ ಸಮಯ ನೀಡದವರ ಬೆಂಬಲವನ್ನು ಕೋರಿದ್ದಾರೆ, ಎಂದು ವ್ಯಂಗ್ಯ ಮಾಡಿದ್ದಾರೆ.
ಓದಿ : ಸಚಿವ ಈಶ್ವರಪ್ಪ ಸಿಎಂ ವಿರುದ್ಧ ನೀಡಿರುವ ದೂರಿನ ಬಗ್ಗೆ ನನಗೇನೂ ತಿಳಿಯದು – ಕಾರಜೋಳ
ಬಾಂಗ್ಲಾದೇಶದ ಜೆಶೋರೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಕ್ಕಾಗಿ ತಮ್ಮ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಚುನಾವಣಾ ಆಯೋಗಕ್ಕೆ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ ದೂರಿನ ಬಗ್ಗೆ ಪ್ರಸ್ತಾಪಿಸಿದ ಮೋದಿ, ಕೆಲವು ದಿನಗಳ ಹಿಂದೆ, ನಾನು ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದೆ, ಅಲ್ಲಿ ನಾನು ಜೆಶೋರೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದೆ. ನಾನು ದೇಶಕ್ಕೆ ಆಶೀರ್ವಾದ ಕೋರಿದ್ದೆ. ಅದಕ್ಕೆ ದೀದಿ ಆಕ್ಷೇಪ ವ್ಯಕ್ತಪಡಿಸಿದರು. ಒರಕಂಡಿಯಲ್ಲಿ, ಹರಿಚಂದ್ ಠಾಕೂರ್ ಮತ್ತು ಗುರುಚಂದ್ ಠಾಕೂರ್ ಅವರ ಪವಿತ್ರ ಭೂಮಿಗೆ ಭೇಟಿ ನೀಡಿದೆ. ಅವರು ನನ್ನ ವಿರುದ್ಧ ತಿರುಗಿ ಬಿದ್ದರು. ದೇವಸ್ಥಾನಕ್ಕೆ ಭೇಟಿ ನೀಡುವುದು ತಪ್ಪೇ ? ಎಂದು ಕೇಳಿದ್ದಾರೆ.
ಇನ್ನು, ಮಮತಾ ಅವರಿಗೆ ಜೈ ಶ್ರೀರಾಮ್ ಘೋಷಣೆ ಕೂಗುವುದರ ಬಗ್ಗೆ ಭಿನ್ನಮತವಿದೆ. ದುರ್ಗಾ ಮೂರ್ತಿಗಳನ್ನು ವಿಸರ್ಜನೆ ಮಾಡುವುದರ ಬಗ್ಗೆಯೂ ಅವರಲ್ಲಿ ಆಕ್ಷೇಪವಿತ್ತು. ಈಗ ತಿಲಕ ಹಾಗೂ ಕೇಸರಿ ಬಟ್ಟೆಗಳ ಬಗ್ಗೆಯೂ ಭಿನ್ನಾಭಿಪ್ರಾಯಗಳಿವೆ. ಬಿಜೆಪಿಯ ಸಿದ್ಧಾಂತದ ಬಗ್ಗೆ ಅವರಲ್ಲಿ ಹಗೆತನವಿದೆ ಎಂದಿದ್ದಾರೆ.
ಪಶ್ಚಿಮ ಬಂಗಾಳದ ಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ ಮೋದಿ, ರಾಜ್ಯದಲ್ಲಿ 200ಕ್ಕಿಂತ ಹೆಚ್ಚು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಅವರು ಭರವಸೆ ವ್ಯಕ್ತ ಪಡಿಸಿದ್ದಾರೆ.
ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದ ಸಂದರ್ಭದಲ್ಲಿ ಮೋದಿ, ಮಾತುವಾ ಸಮುದಾಯದ ಸಂಸ್ಥಾಪಕ ಹರಿಚಂದ್ ಠಾಕೂರ್ ಅವರ ಕುಟುಂಬದೊಂದಿಗೆ ಸಮಯ ಕಳೆದಿದ್ದರು. ಬಾಂಗ್ಲಾದೇಶದ ಮಾತುವಾ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದ ಒಂದು ಸಮುದಾಯವಾಗಿದ್ದು, ಪಶ್ಚಿಮ ಬಂಗಾಳದ ಕನಿಷ್ಠ ಆರು ಸಂಸದೀಯ ಸ್ಥಾನಗಳಲ್ಲಿ ಆ ಸಮುದಾಯ ಇದೆ ಎಂಬ ಕಾರಣಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷ, ಪಶ್ಚಿಮ ಬಂಗಾಳದ ಚುನಾವಣೆಯ ಸಂದರ್ಭದಲ್ಲಿ ಕೆಲವು ಕ್ಷೇತ್ರಗಳ ಮೇಲೆ ಪ್ರಭಾವ ಬಿರುವ ದೃಷ್ಟಿಯಿಂದ ಬಾಂಗ್ಲಾದೇಶಕ್ಕೆ ಪ್ರಧಾನಿ ಭೇಟಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.
ಓದಿ : ಬೆಳಗಾವಿ ,ಮಸ್ಕಿ , ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ -ಕಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.