ಎಲ್ಲಕ್ಕೂ ಮಹಾಭಿಯೋಗ ಉತ್ತರವಲ್ಲ
Team Udayavani, Apr 8, 2018, 7:00 AM IST
ನವದೆಹಲಿ: “ಎಲ್ಲ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಮಹಾಭಿಯೋಗ ಒಂದೇ ಪರಿಹಾರವಲ್ಲ. ಇಲ್ಲಿ ವ್ಯವಸ್ಥೆಯನ್ನು ಸರಿಪಡಿಸ ಬೇಕಾದ್ದು ಮುಖ್ಯವಾಗುತ್ತದೆ.’ ಸಿಜೆಐ ದೀಪಕ್ ಮಿಶ್ರಾ ವಿರುದ್ಧ ಪ್ರತಿ ಪಕ್ಷಗಳು ಮಹಾಭಿಯೋಗ ಪ್ರಕ್ರಿಯೆಗೆ ಮುಂದಾಗಿರುವ ಕುರಿತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆ. ಚೆಲಮೇಶ್ವರ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ಜನವರಿಯಲ್ಲಿ ಸಿಜೆಐ ಮಿಶ್ರಾ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್ಗಳಲ್ಲಿ ಒಬ್ಬರಾದ ನ್ಯಾ.ಚೆಲಮೇಶ್ವರ್ ಶನಿವಾರ ದೆಹಲಿಯ ಹಾರ್ವರ್ಡ್ ಕ್ಲಬ್‌ನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಪ್ರಕರಣಗಳನ್ನು ವಿವಿಧ ನ್ಯಾಯಪೀಠಗಳಿಗೆ ಹಂಚಿಕೆ ಮಾಡುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಅತ್ಯಂತ ಜವಾಬ್ದಾರಿ ಯಿಂದ ನಿಭಾಯಿಸಬೇಕು. ಕೇಸುಗಳನ್ನು ತಮ್ಮ ಆದ್ಯತೆಯ ಪೀಠಗಳಿಗೆ ಹಂಚಿದರೆ, ನ್ಯಾಯಾಂಗ ವ್ಯವಸ್ಥೆಯ ಮೇಲೆ ದೇಶದ ಜನರಿಗಿರುವ ನಂಬಿಕೆಯೇ ನಾಶವಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಜತೆಗೆ, ತಾವು ಜೂನ್ 22ರಂದು ನಿವೃತ್ತಿ ಯಾಗಲಿದ್ದು, ನಿವೃತ್ತಿ ನಂತರ ಸರಕಾರದ ಉದ್ಯೋಗ ವನ್ನೂ ಸ್ವೀಕರಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.