ಕಾಂಗ್ರೆಸ್ ಕೆಡಲು UPA-2 ಕಾರಣ : ಹಿರಿಯರ ವಿರುದ್ಧ ಕಿರಿಯರ ಕಿಡಿ
ರಾಹುಲ್ ನೇತೃತ್ವಕ್ಕೆ ಆಗ್ರಹ
Team Udayavani, Aug 1, 2020, 6:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-2 ಅವಧಿಯ ಲೋಪಗಳೇ ಕಾಂಗ್ರೆಸ್ ಹಾಳಾಗಲು ಕಾರಣ ಎಂದು ಪಕ್ಷದ ಹಿರಿಯರ ವಿರುದ್ಧ ಕಿರಿಯ ನಾಯಕರು ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಗುರುವಾರ ನಡೆದ ಸಂಸದರ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಹಿರಿಯರು ಮತ್ತು ಕಿರಿಯ ನಾಯಕರ ನಡುವೆ ಜಟಾಪಟಿ ನಡೆದಿದೆ.
2014ರ ಬಳಿಕ ದೇಶದಲ್ಲಿ ಕಾಂಗ್ರೆಸ್ ಸಾಮೂಹಿಕ ಸೋಲಿಗೆ ಯುಪಿಎ-2 ಮುಖ್ಯ ಕಾರಣ. ಸಿಂಗ್ ಸಂಪುಟದಲ್ಲಿದ್ದ ಹಿರಿಯ ಸಚಿವರು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಸಮನ್ವಯದಿಂದ ಕಾರ್ಯನಿರ್ವಹಿಸಲಿಲ್ಲ ಎಂದು ಯುವ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಭಾವಿ ಕಿರಿಯ ನಾಯಕರು ಪಕ್ಷ ತೊರೆಯುತ್ತಿರುವ ಹೊತ್ತಿನಲ್ಲಿ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ನಾಯಕತ್ವ ವಹಿಸಿಕೊಳ್ಳ ಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಭಾವಿ ಕಿರಿಯರ ಪಕ್ಷತ್ಯಾಗ
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನವನ್ನು ತೊರೆದಿದ್ದರು. ಇತ್ತೀಚೆಗೆ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಸಚಿನ್ ಪೈಲಟ್ ಪಕ್ಷವನ್ನು ತೊರೆದಿರುವುದು ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ.
ಮನಮೋಹನ್ ಮೌನ
ಸುಮಾರು ನಾಲ್ಕು ತಾಸುಗಳ ಕಾಲ ನಡೆದ ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಂಪೂರ್ಣ ಮೌನಕ್ಕೆ ಶರಣಾಗಿದ್ದರು ಎಂದು ಮೂಲಗಳು ತಿಳಿಸಿವೆ. ಯುಪಿಎ-1 ಮತ್ತು ಯುಪಿಎ-2ರ ಅವಧಿಯ 10 ವರ್ಷಗಳ ಕಾಲ ಸಿಂಗ್ ಅವರು ಪ್ರಧಾನಿಯಾಗಿದ್ದರು. ಯುಪಿಎ-2ರ ಅವಧಿಯಲ್ಲಿ ಭಾರೀ ಹಗರಣಗಳು ಹಾಗೂ ಯೋಜನೆಗಳ ದುರುಪಯೋಗ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.