ಐಎಎಫ್ ದಾಳಿ ನಡೆದಿರುವುದು ನಿಜವೇ, ಸುಳ್ಳೇ ? ದಿಗ್ವಿಜಯ್ ಪ್ರಶ್ನೆ
Team Udayavani, Mar 5, 2019, 6:29 AM IST
ಹೊಸದಿಲ್ಲಿ : ”ಭಾರತೀಯ ವಾಯು ಪಡೆ ಪಾಕಿಸ್ಥಾನದೊಳಗಿನ ಉಗ್ರ ಶಿಬಿರಗಳ ಮೇಲೆ ನಡೆಸಿರುವ ಬಾಂಬ್ ದಾಳಿಯನ್ನು ವಿದೇಶಿ ಮಾಧ್ಯಮಗಳು ಸುಳ್ಳೆಂದು ವರದಿ ಮಾಡಿವೆ; ಆದುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ನಡೆಸಿರುವ ವಾಯು ದಾಳಿಗಳು ನಿಜವೇ ಸುಳ್ಳೇ; ನಿಜವೆಂದಾದರೆ ದಾಳಿಯಲ್ಲಿ ಸತ್ತಿರುವ ಉಗ್ರರ ಸಂಖ್ಯೆ ನಿಖರವಾಗಿ ಎಷ್ಟು ಎಂಬುದನ್ನು ತಿಳಿಸಬೇಕು” ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
”ಭಾರತೀಯ ವಾಯು ಪಡೆ ದಾಳಿಯಲ್ಲಿ ಮೃತಪಟ್ಟಿರುವರೆನ್ನಲಾದ ಉಗ್ರರ ಸಂಖ್ಯೆಯನ್ನು ಒಬ್ಬೊಬ್ಬ ಬಿಜೆಪಿ ನಾಯಕರು ಒಂದೊಂದು ರೀತಿಯಾಗಿ ನೀಡುತ್ತಿದ್ದಾರೆ. ದಾಳಿ ನಡೆದ ದಿನ ಮೃತ ಉಗ್ರರ ಸಂಖ್ಯೆ 350 ಎಂದು ಹೇಳಲಾಗಿತ್ತು. ಅನಂತರ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮೃತ ಉಗ್ರರ ಸಂಖ್ಯೆ 250 ಎಂದು ಹೇಳಿದರು. ಹಾಗಿರುವಾಗ ಮೃತ ಉಗ್ರರ ಸಂಖ್ಯೆ ನಿಖರವಾಗಿ ಎಷ್ಟು ಎನ್ನುವ ಬಗ್ಗೆ ಗೊಂದಲವಿದೆ. ಆದುದರಿಂದ ಪ್ರಧಾನಿ ಮೋದಿ ಈ ಗೊಂದಲವನ್ನು ನಿವಾರಿಸಿ ನಿಖರ ಅಂಕೆ-ಸಂಖ್ಯೆಯನ್ನು ನೀಡಬೇಕು” ಎಂದು ದಿಗ್ವಿಜಯ್ ಸಿಂಗ್ ಹೇಳಿದರು.
”ಅಮಿತ್ ಶಾ ಅವರಿಗಿಂತ ಮೊದಲು ಹಿರಿಯ ಬಿಜೆಪಿ ನಾಯಕ ಎಸ್ ಎಸ್ ಅಹ್ಲುವಾಲಿಯಾ ಅವರು ಐಎಎಫ್ ದಾಳಿಯಲ್ಲಿ ಯಾವನೇ ಉಗ್ರ ಸತ್ತಿಲ್ಲ ಎಂದು ಕೂಡ ಹೇಳಿದ್ದರು. ಈಗ ವಿದೇಶೀ ಮಾಧ್ಯಮಗಳು ಐಎಎಫ್ ನಿಂದ ವಾಯು ದಾಳಿಯೇ ನಡೆದಿಲ್ಲ ಎಂದು ವರದಿ ಮಾಡುತ್ತಿವೆ” ಎಂದು ದಿಗ್ವಿಜಯ್ ಸಿಂಗ್ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.