ದಿನಕರನ್ ವಿರುದ್ಧ ದೇಶದ್ರೋಹ ಪ್ರಕರಣ
Team Udayavani, Oct 3, 2017, 6:20 AM IST
ಚೆನ್ನೈ: ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್‌ಗೆ ಹೊಸ ಸಂಕಷ್ಟ ಶುರುವಾಗಿದೆ. ಪ್ರಧಾನಿ ಮೋದಿ ಹಾಗೂ ತಮಿಳು ನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಅವಹೇಳನಕಾರಿ ಕರಪತ್ರ ಗಳನ್ನು ಹಂಚಿರುವ ಆರೋಪದಲ್ಲಿ ದಿನಕರನ್ ಹಾಗೂ ಅವರ ಬೆಂಬಲಿಗರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ಪಳನಿ ಹಾಗೂ ಪನ್ನೀರ್‌ಸೆಲ್ವಂ ಸರಕಾರವು “ಕೊಲೆ ಗಡುಕ ಸರಕಾರ’ ಎಂದು ಬರೆದಿರುವ ಕರಪತ್ರವನ್ನು ದಿನಕರನ್ ಬೆಂಬಲಿಗರು ಇತ್ತೀಚೆಗೆ ಸಾರ್ವಜನಿಕರಿಗೆ ಹಂಚಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ದಿನಕರನ್‌ರ 10 ಮಂದಿ ಬೆಂಬಲಿಗರನ್ನು ಬಂಧಿಸಿದೆ. ಇವರ ವಿರುದ್ಧ ದೇಶದ್ರೋಹ, ಕ್ರಿಮಿನಲ್ ಸಂಚು, ಶತ್ರುತ್ವಕ್ಕೆ ಪ್ರಚೋದನೆ, ಮಾನಹಾನಿ, ಉದ್ದೇಶಪೂರ್ವಕ ಅವಮಾನ ಸೇರಿದಂತೆ ಹಲವು ಆರೋಪ ಗಳನ್ನು ಹೊರಿಸಲಾಗಿದ್ದು, ಆರೋಪ ಸಾಬೀತಾದರೆ ಗರಿಷ್ಠ ಜೀವಾವಧಿ ಶಿಕ್ಷೆ ಎದುರಿಸಬೇಕಾಗಬಹುದು.
ಪರೋಲ್‌ಗೆ ಶಶಿಕಲಾ ಅರ್ಜಿ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ತಮಗೆ 15 ದಿನಗಳ ಪರೋಲ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅನಾರೋಗ್ಯಕ್ಕೀಡಾಗಿರುವ ತಮ್ಮ ಪತಿ ಎಂ. ನಟರಾಜನ್‌ರನ್ನು ಭೇಟಿಯಾಗಲು ಅವಕಾಶ ಕಲ್ಪಿಸುವಂತೆ ಶಶಿಕಲಾ ಮನವಿ ಮಾಡಿದ್ದಾರೆ ಎಂದು ಅವರ ಸಂಬಂಧಿ, ಪಕ್ಷದ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ. ನಟರಾಜನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯದಲ್ಲೇ ಯಕೃತ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಕರ್ನಾಟಕ ಬಂದೀಖಾನೆ ಇಲಾಖೆ ನಮ್ಮ ಮನವಿಯನ್ನು ಸಮ್ಮತಿಸಿ ಪರೋಲ್ ನೀಡು ತ್ತದೆ ಎಂಬ ಭರವಸೆ ಇದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.