ನೇರ ತೆರಿಗೆ ಸಂಗ್ರಹ ಶೇ.24 ಹೆಚ್ಚಳ: ಕೇಂದ್ರ ವಿತ್ತ ಖಾತೆ
Team Udayavani, Feb 12, 2023, 7:05 AM IST
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ನೇರ ತೆರಿಗೆ ಸಂಗ್ರಹ ಶೇ. 24ರಷ್ಟು ಹೆಚ್ಚಳವಾಗಿದ್ದು, ಈವರೆಗೆ ಒಟ್ಟು 15.67 ಲಕ್ಷ ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಶನಿವಾರ ಕೇಂದ್ರ ವಿತ್ತ ಸಚಿ ವಾಲಯ ಮಾಹಿತಿ ನೀಡಿದೆ.
ಜತೆಗೆ ರೀಫಂಡ್ (ಮರು ಪಾವತಿ)ಗೆ ಹೊಂದಾಣಿಕೆ ಮಾಡಿದ ಬಳಿಕ ನಿವ್ವಳ ನೇರ ತೆರಿಗೆ ಸಂಗ್ರಹ 12.98 ಲಕ್ಷ ಕೋಟಿ ರೂ. ಆಗಿದ್ದು, ಶೇ. 18.40ರ ಬೆಳವಣಿಗೆ ದಾಖಲಿಸಿದೆ. ಇದು ಪ್ರಸಕ್ತ ಹಣಕಾಸು ವರ್ಷದ ನೇರ ತೆರಿಗೆ ಸಂಗ್ರಹದ ಪರಿಷ್ಕೃತ ಅಂದಾಜಿನ ಶೇ. 79ರಷ್ಟು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ಫೆ. 10ರ ವರೆಗೆ 15.67 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 24.09ರಷ್ಟು ಏರಿಕೆ ಆಗಿದೆ. ವಿತ್ತ ವರ್ಷ ಮುಗಿಯಲು ಇನ್ನೂ 2 ತಿಂಗಳು ಬಾಕಿಯಿದ್ದು, ಹಾಲಿ ಹಣಕಾಸು ವರ್ಷದಲ್ಲಿ (2022 23) ನೇರ ತೆರಿಗೆಯ ಆದಾಯವು ಶೇ. 17ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. 2021 22ರ ಹಣಕಾಸು ವರ್ಷದಲ್ಲಿ ಒಟ್ಟಾರೆ ನೇರ ತೆರಿಗೆ ಸಂಗ್ರಹ 14.08 ಲಕ್ಷ ಕೋಟಿ ರೂ. ಆಗಿತ್ತು.
ಎಪ್ರಿಲ್ ಮತ್ತು ಫೆಬ್ರವರಿ 10ರ ನಡುವೆ ಒಟ್ಟು ಕಾರ್ಪೊರೇಟ್ ಆದಾಯ ತೆರಿಗೆ ಮತ್ತು ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಕ್ರಮವಾಗಿ ಶೇ. 19.33 ಮತ್ತು ಶೇ. 29.63ರಷ್ಟು ಏರಿಕೆ ಕಂಡಿದೆ.
ರಾಜ್ಯ: ದಾಖಲೆ ಜಿಎಸ್‌ಟಿ ಸಂಗ್ರಹ
ಬೆಂಗಳೂರು: ಈ ವರ್ಷದ ಜನವರಿಯಲ್ಲಿ 6,085 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸುವ ಮೂಲಕ ರಾಜ್ಯ ಸರಕಾರ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಶೇ. 30ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣ ಹೊಂದಿರುವ ರಾಜ್ಯವಾಗಿ ಮುಂದುವರಿದಿದೆ. ತೆರಿಗೆ ಸಂಗ್ರ ಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.