ನೇರ ತೆರಿಗೆ ಸಂಗ್ರಹದಲ್ಲಿ ಏರಿಕೆ
Team Udayavani, Dec 4, 2018, 10:05 AM IST
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ 6.63 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹಿಸಲಾಗಿದ್ದು, ಇದು ಕೇಂದ್ರ ಸರಕಾರದ ನೋಟು ಅಪಮೌಲ್ಯ ನಿರ್ಧಾರದ ಸಕಾರಾತ್ಮಕ ಪರಿಣಾಮ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಸೋಮವಾರ ಹೇಳಿದೆ.
7 ವರ್ಷಗಳಿಗೆ ಹೋಲಿಕೆ ಮಾಡಿದರೆ ಇದೊಂದು ದಾಖಲೆ ಎಂದು ಮಂಡಳಿ ಪ್ರತಿಪಾದಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 11.5 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹಾಕಿಕೊಳ್ಳಲಾಗಿತ್ತು. ಆ ಪೈಕಿ ನ. 15ರ ವರೆಗೆ 6.63 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ ಎಂದು ಮಂಡಳಿಯ ವರದಿಯಲ್ಲಿ ಉಲ್ಲೇಖೀಸಲಾಗಿದೆ. 2017-18ನೇ ವಿತ್ತೀಯ ವರ್ಷಕ್ಕೆ ಹೋಲಿಸಿದರೆ, ಸಂಗ್ರಹ ಪ್ರಮಾಣ ಶೇ.16.4ರಷ್ಟು ಹೆಚ್ಚಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2013-14ನೇ ಸಾಲಿನಲ್ಲಿ 3.79 ಕೋಟಿ ಮಂದಿ ರಿಟರ್ನ್ಸ್ ಫೈಲ್ ಮಾಡಿದ್ದರೆ, 2017-18ನೇ ಸಾಲಿನಲ್ಲಿ ಅದರ ಸಂಖ್ಯೆ 6.87 ಕೋಟಿಗೆ ಏರಿದೆ. ಅಂದರೆ, ಇದು ಶೇ.81ರಷ್ಟು ಏರಿಕೆ. ಅಲ್ಲದೆ, 1.07 ಕೋಟಿ ಮಂದಿ ಹೊಸತಾಗಿ ರಿಟರ್ನ್ಸ್ ಫೈಲ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.