ಪ‹ಜ್ಞಾವಂತ ಸಮಾಜ ನಿರ್ಮಿಸಿ: ರಾಷ್ಟ್ರಪತಿ ಕರೆ
Team Udayavani, Jan 26, 2018, 7:00 AM IST
ಹೊಸದಿಲ್ಲಿ: ನಮ್ಮ ಸಮಾಜವನ್ನು ನಾಗರಿಕ ಪ್ರಜ್ಞೆಯುಳ್ಳ ಸಮಾಜವನ್ನಾಗಿಸುವ ಆವಶ್ಯಕತೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿಯ, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಇತಿಹಾಸಕ್ಕೆ ಸಂಬಂಧಿಸಿದ ಯಾವುದೇ ವಿಚಾರವೊಂದರ ಬಗ್ಗೆ ಪರ- ವಿರೋಧ ಧೋರಣೆಗಳು ಎದುರಾದಾಗ, ಒಂದು ಧೋರಣೆ ಹೊಂದಿರುವವರು ವಿರೋಧ ಧೋರಣೆ ಹೊಂದಿರುವವರ ಗೌರವಕ್ಕೆ ಚ್ಯುತಿ ತಾರದಂತೆ ನಡೆದುಕೊಳ್ಳಬೇಕೆಂದು ಕರೆ ನೀಡಿದ್ದಾರೆ. ಈ ಮೂಲಕ, ‘ಪದ್ಮಾವತ್’ ಚಿತ್ರದ ಹಿನ್ನೆಲೆಯಲ್ಲಿ, ದೇಶಾದ್ಯಂತ ಭುಗಿಲೆದ್ದಿರುವ ಗಲಭೆ ಹಿನ್ನೆಲೆಯಲ್ಲಿ ಅವರು ಪರೋಕ್ಷ ಕಿವಿಮಾತು ಹೇಳಿದ್ದಾರೆ. ಅಲ್ಲದೆ, ಸಮಾಜದ ಪ್ರತಿ ಸಂಸ್ಥೆಗಳ ನಡುವೆ ನೈತಿಕತೆ ಇರುವುದು ಅತ್ಯವಶ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೆ, ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ಅನೇಕರು ಒಂದೇ ಧ್ಯೇಯದೊಂದಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದರ ಫಲವಾಗಿ ಸ್ವಾತಂತ್ರ್ಯ ಸಿಕ್ಕಿತು. ಇದರ ಫಲದಿಂದ ಸಂವಿಧಾನ ರಚನೆಯಾಯಿತು. ಸ್ವಾತಂತ್ರ್ಯ ಹಾಗೂ ಸಂವಿಧಾನಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳನ್ನೇ ಆದರ್ಶವಾಗಿಟ್ಟುಕೊಂಡು ನಾವು ಅಭಿವೃದ್ಧಿಯತ್ತ ಹೆಜ್ಜೆ ಹಾಕಬೇಕಿದೆ ಎಂದರು. ಇದೇ ವೇಳೆ, ಬಡವರ ಕಲ್ಯಾಣ ನಮ್ಮ ಮೂಲಮಂತ್ರವಾಗಬೇಕೆಂದು ಆಶಿ ಸಿದ ಅವರು, “ಇತರರಿಗೆ ಸಹಾಯ ಮಾಡುವ ಗುಣ ನಮ್ಮ ಸಮಾಜದ ಅಡಿಪಾಯ. ಈ ವಿಶೇಷ ಗುಣದಿಂದ ನಮ್ಮಲ್ಲಿರುವ ಬಡವರ ಕಲ್ಯಾಣಕ್ಕಾಗಿ ಸಹಾಯ ಹಸ್ತ ಚಾಚಬೇಕಿದೆ” ಎಂದಿದ್ದಾರೆ.
ಭಾಷಣದ ಆರಂಭದಲ್ಲೇ, ಹುತಾತ್ಮ ಯೋಧರು, ವೈದ್ಯರು, ರೈತರು, ಶುಶ್ರೂಷಕಿಯರು, ವಿಜ್ಞಾನಿಗಳು, ಎಂಜಿನಿಯರ್‌ಗಳು, ತಾಯಂದಿರು ಹಾಗೂ ಸಮಾಜದ ಎಲ್ಲಾ ವರ್ಗಗಳ ಶ್ರಮಿಕರಿಗೆ ಧನ್ಯವಾದ ಅರ್ಪಿಸಿದ ಅವರು, ಸ್ವಾತಂತ್ರ್ಯ ಹೋರಾಟಗಾರರನ್ನೂ ಸ್ಮರಿಸಿದರು. ಭಾರತದ ಜನಸಂಖ್ಯೆಯ ಶೇ.60ರಷ್ಟು ಪಾಲು 35 ವರ್ಷ ವಯಸ್ಸಿಗಿಂತ ಕಡಿಮೆಯವರಾಗಿದ್ದು, ಇದರ ಉಪಯೋಗವನ್ನು ಯುವಜನರು ಪಡೆಯಬೇಕು” ಎಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.