‘ಮಹಾ’ ಕಾಂಗ್ರೆಸ್‌ನೊಳಗೂ ಮುನಿಸು ಸ್ಫೋಟ
ಲೆಟರ್‌ಬಾಂಬ್ ನಡುವೆ ಸೋನಿಯಾ ಗಾಂಧಿಗೆ ಮತ್ತೂಂದು ತಲೆನೋವು
Team Udayavani, Aug 29, 2020, 7:06 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: 23 ಮುಖಂಡರ ‘ಲೆಟರ್ ಬಾಂಬ್’ ಸ್ಫೋಟದ ಬೆನ್ನಲ್ಲೇ, ಮಹಾರಾಷ್ಟ್ರದ ಕಾಂಗ್ರೆಸ್ ಕೂಡ ಬೂದಿ ಮುಚ್ಚಿದ ಕೆಂಡವಾಗಿ, ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಲೆನೋವು ಹೆಚ್ಚಿಸಿದೆ.
ಇಲ್ಲಿ ಕಾಂಗ್ರೆಸ್, ಎನ್‌ಸಿಪಿ ಜತೆ ಸೇರಿ ಶಿವಸೇನೆ ನೇತೃತ್ವದ ಮೈತ್ರಿ ಸರಕಾರಕ್ಕೆ ಬೆಂಬಲ ಸೂಚಿಸಿರುವುದು ನಿಜ. ಆದರೆ, ಶಿವಸೇನೆ ಮಾತ್ರ ಕೈ ಶಾಸಕರಿಗೆ ಸೂಕ್ತ ಗೌರವ ನೀಡುತ್ತಿಲ್ಲ.
‘ನಮ್ಮ ವಿಧಾನಸಭಾ ಕ್ಷೇತ್ರಗಳಿಗೆ ಶಿವಸೇನೆ ಅನುದಾನದ ತಾರತಮ್ಯ ಎಸಗುತ್ತಿದೆ’ ಎಂದು ಕೈ ಶಾಸಕರು ಉದ್ಧವ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಧರಣಿ ಎಚ್ಚರಿಕೆ: ಮರಾಠವಾಡ ಪ್ರದೇಶ ಜಲ್ಸಾದ ಶಾಸಕ ಕೈಲಾಶ್ ಗೊರಂಟ್ಯಾಲ್ ಅನುದಾನ ಹಂಚಿಕೆ ವಿಚಾರದಲ್ಲಿ ಶಿವಸೇನೆ ಮಲತಾಯಿ ಧೋರಣೆ ಅನುಸರಿಸುತ್ತಿದೆ.
ಜಲ್ಸಾ ಮುನ್ಸಿಪಲ್ ಕೌನ್ಸಿಲ್‌ಗೆ ಅನುದಾನ ಬಿಡುಗಡೆ ಮಾಡದೆ ಶಿವಸೇನೆಯ ಏಕನಾಥ ಶಿಂಧೆ ನೇತೃತ್ವದ ನಗರ ಅಭಿವೃದ್ಧಿ ಪ್ರಾಧಿಕಾರ ಸತಾಯಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಶಿವಸೇನೆಯ ಈ ನಿಲುವು ಖಂಡಿಸಿ ಕೈ ಪಕ್ಷದ 11 ಶಾಸಕರು ಉಪವಾಸ ಸತ್ಯಾಗ್ರಹ ನಡೆಸುವುದಾಗಿಯೂ ಬೆದರಿಕೆಯೊಡ್ಡಿದ್ದಾರೆ. ಮೈತ್ರಿ ಸರ್ಕಾರದ ಕಾಂಗ್ರೆಸ್‌ನ ಒಟ್ಟು 44 ಶಾಸಕರಲ್ಲಿ 11 ಶಾಸಕರ ಈ ಬಂಡಾಯದ ಬಿಸಿಯನ್ನು ತಣಿಸಲು ಕೈ ಹೈಕಮಾಂಡ್ ಹರಸಾಹಸಪಡುತ್ತಿದೆ.
ಥೋರತ್ ದುರ್ಬಲ: ಇನ್ನೊಂದೆಡೆ ಪ್ರಬಲ ಮರಾಠ ಸಮುದಾಯಕ್ಕೆ ಸೇರಿದ ಕಂದಾಯ ಸಚಿವ ಬಾಳಾಸಾಹೇಬ್ ಥೋರತ್ ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿರುವುದು ಅನೇಕರಿಗೆ ಅಸಮಾಧಾನ ತಂದಿದೆ. 8 ಬಾರಿ ಶಾಸಕರಾದ ಅನುಭವವಿದ್ದರೂ ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಥೋರತ್ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಕೈಗೆ 24×7 ನಾಯಕತ್ವ ಬೇಕಿದೆ: ಕಪಿಲ್ ಸಿಬಲ್
ಲೆಟರ್‌ಬಾಂಬ್‌ನಲ್ಲಿ ಪ್ರಮುಖವಾಗಿ ಸಹಿ ಹಾಕಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ ಕಪಿಲ್ ಸಿಬಲ್ ಮತ್ತೆ ಪಕ್ಷವನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಕಾಂಗ್ರೆಸ್ ಐತಿಹಾಸಿಕವಾಗಿ ಅಧಃಪತನಕ್ಕೆ ಇಳಿದಿದೆ. ಈ ಪಕ್ಷವನ್ನು ಮೇಲೆತ್ತಲು 24×7 ನಾಯಕತ್ವದ ಆವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ನಮ್ಮ ಪತ್ರ, ವಿಮರ್ಶೆಗಳ ಉದ್ದೇಶ ಪಕ್ಷ ಪುನರುಜ್ಜೀವ ನಗೊಳಿಸುವುದೇ ಆಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.
– ಶಿವಸೇನೆ ವಿರುದ್ಧ 11 ಕಾಂಗ್ರೆಸ್‌ಶಾಸಕರ ಧರಣಿ ಎಚ್ಚರಿಕೆ
– ಅನುದಾನ ನೀಡದೆ ಆಟ ಆಡಿಸುತ್ತಿರುವ ಶಿವಸೇನೆ
– 11 ಶಾಸಕರ ಬಂಡಾಯ ಶಮನಕ್ಕೆ ಕಾಂಗ್ರೆಸ್ ಹರಸಾಹಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.