ದಿನಕರನ್ ಬಣಕ್ಕೆ ಅನರ್ಹತೆ ಶಾಕ್
Team Udayavani, Sep 19, 2017, 7:30 AM IST
ಚೆನ್ನೈ: ತಮಿಳುನಾಡಿನಲ್ಲಿ ಮತ್ತೂಂದು ಸುತ್ತಿನ ರಾಜಕೀಯ ಯುದ್ಧ ಆರಂಭವಾಗಿದೆ. ಎಐಎಡಿಎಂಕೆ ಭಿನ್ನಮತೀಯ ನಾಯಕ ಟಿ.ಟಿ.ವಿ.ದಿನಕರನ್ ಬೆಂಬಲಿಗರಾಗಿರುವ 18 ಮಂದಿ ಶಾಸಕರನ್ನು ಅನರ್ಹಗೊಳಿಸಲಾಗಿದೆ.
ತಮಿಳುನಾಡು ವಿಧಾನಭೆ ಸ್ಪೀಕರ್ ಪಿ.ಧನಪಾಲ್ ಸೋಮವಾರ ಈ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಸೆ.20ರ ನಂತರ ನಡೆಯಬಹುದಾದ ವಿಶ್ವಾಸಮತ ಕೋರಿಕೆಯಲ್ಲಿ ಪಳನಿಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಗಳಿಸುವ ಸಾಧ್ಯತೆ ನಿಚ್ಚಳವಾಗಿದೆ. ಈ ಬೆಳವಣಿಗೆಯಿಂದಾಗಿ ಆಳುವ ಎಐಎಡಿಎಂಕೆಯಲ್ಲಿ ಪಕ್ಷ ಮತ್ತು ಅಧಿಕಾರದ ನಿಯಂತ್ರಣಕ್ಕಾಗಿ ಹಲವು ತಿಂಗಳಿಂದ ನಡೆಯುತ್ತಿದ್ದ ಗುದ್ದಾಟ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ.
ಹೀಗಾಗಿ, ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಬಹುಮತಕ್ಕೆ 107 ಮತಗಳು ಬಂದರೆ ಸಾಕು. ಎರಡೂ ಬಣಗಳ ಶಾಸಕರ ಸಂಖ್ಯೆ ಸೇರಿ ಒಟ್ಟು 124 ಶಾಸಕರ ಬೆಂಬಲ ಇದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಹೇಳಿಕೊಂಡಿದ್ದರು. ಈ ನಡುವೆ ಕೇಂದ್ರದಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿಎಂ ಪಳನಿಸ್ವಾಮಿ ಮುಂದಾಗಿದ್ದಾರೆ ಎಂದು ಹೇಳಲಾಗು ತ್ತಿದೆ. ನಮಕ್ಕಲ್‌ನಲ್ಲಿ ಪಳನಿ ಆಡಿದ್ದ ಮಾತುಗಳು ಅದಕ್ಕೆ ಪೂರಕವಾಗಿದೆ. ಕೇಂದ್ರ-ರಾಜ್ಯದ ಬಾಂಧವ್ಯ ಹೇಗಿರ ಬೇಕೋ ಹಾಗೆ ತಮಿಳುನಾಡು ನಡೆದು ಕೊಳ್ಳುತ್ತಿದೆ. ರಾಜ್ಯವೇನೂ ಕೇಂದ್ರದ ಗುಲಾಮ ಅಲ್ಲ ಎಂದಿದ್ದಾರೆ.
ಆಡಳಿತಾರೂಢ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಿ.ಕೆ.ಶಶಿಕಲಾ ಮತ್ತು ಉಪ ಮಹಾಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಟಿ.ಟಿ.ವಿ.ದಿನಕರನ್‌ರನ್ನು ಕಿತ್ತು ಹಾಕಿ, ಡಿಸಿಎಂ ಓ.ಪನ್ನೀರ್‌ಸೆಲ್ವಂ ಮತ್ತು ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ನೇತೃತ್ವದ ಬಣ ನಿರ್ಣಯ ಕೈಗೊಂಡಿತ್ತು. ದಿನಕರನ್ ಬಣದ ಶಾಸಕರು ಹಂಗಾಮಿ ರಾಜ್ಯಪಾಲ ವಿದ್ಯಾಸಾಗರ ರಾವ್ ಬಳಿಗೆ ತೆರಳಿ ಸರ್ಕಾರಕ್ಕೆ ಬೆಂಬಲವಿಲ್ಲವೆಂ ದಿದ್ದರು. ಹೀಗಾಗಿ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ದಿನಕರನ್ ಬಣ ಮದ್ರಾಸ್ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಸೆ.14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ಸೆ.20ರ ವರೆಗೆ ವಿಶ್ವಾಸಮತ ಕೋರಬೇಕಾದ ಅಗತ್ಯವಿಲ್ಲ ಎಂದು ಹೇಳಿತ್ತು. ಹೀಗಾಗಿ, ಹೈಕೋರ್ಟ್ ತೀರ್ಮಾನವೂ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.