ಗುರುವಾಯೂರು “ಕೊಡತಿ ವಿಳಕ್ಕು’ ಕಾರ್ಯಕ್ರಮಕ್ಕೆ ಕೋರ್ಟ್ ತಕರಾರು
Team Udayavani, Nov 3, 2022, 7:20 AM IST
ತಿರುವನಂತಪುರ: ಖ್ಯಾತ ಗುರುವಾಯೂರು ಶ್ರೀಕೃಷ್ಣ ದೇಗುಲದಲ್ಲಿ ವಾರ್ಷಿಕವಾಗಿ ಆಚರಿಸುವ “ಕೊಡತಿ ವಿಳಕ್ಕು'(ನ್ಯಾಯಾಲಯದ ಬೆಳಕು) ಕಾರ್ಯಕ್ರಮದ ಆಯೋಜನೆಯಲ್ಲಿ ಸಕ್ರಿಯವಾಗಿ ತೊಡಗದಂತೆ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್ ಅಧಿಕೃತವಾಗಿ ನೋಟಿಸ್ ನೀಡಿದೆ.
ಚಾವಕ್ಕಾಡ್ ಮುನ್ಸಿಫ್ ಕೋರ್ಟ್ ಬಾರ್ ಅಸೋಸಿಯೇಷನ್ ಸದಸ್ಯರು ಒಳಗೊಂಡ ಸಮಿತಿಯು ವಾರ್ಷಿಕವಾಗಿ ಗುರುವಾಯೂರು ದೇಗುಲದಲ್ಲಿ “ಕೊಡತಿ ವಿಳಕ್ಕು’ ಕಾರ್ಯಕ್ರಮವನ್ನು ಆಯೋಜಿಸುತ್ತಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೈಕೋರ್ಟ್, “ಬಾರ್ ಅಸೋಸಿಯೇಷನ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ನಮಗೆ ಯಾವುದೇ ತಕರಾರಿಲ್ಲ. ಆದರೆ ಕಾರ್ಯಕ್ರಮದ ಹೆಸರು “ಕೊಡತಿ ವಿಳಕ್ಕು’ (ನ್ಯಾಯಾಲಯದ ಬೆಳಕು) ಎಂದು ಇರುವುದು ಸ್ವೀಕಾರಾರ್ಹವಲ್ಲ. ಇದು ರಾಜ್ಯದ ನ್ಯಾಯಾಲಯಗಳು ಕಾರ್ಯಕ್ರಮದ ಸಂಘಟನೆಯೊಂದಿಗೆ ಕೆಲವು ರೀತಿಯಲ್ಲಿ ಸಂಪರ್ಕ ಹೊಂದಿವೆ ಎಂಬ ಅಭಿಪ್ರಾಯ ಬರುವಂತೆ ಮಾಡುತ್ತದೆ,’ ಎಂದು ಹೇಳಿದೆ.
“ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುವ ಜಾತ್ಯಾತೀತ ಪ್ರಜಾಸತ್ತತ್ಮಕ ಸಂಸ್ಥೆಯಾದ ನ್ಯಾಯಾಲಯಗಳು ಯಾವುದೇ ನಿರ್ದಿಷ್ಟ ಧರ್ಮವನ್ನು ಉತ್ತೇಜಿಸುವ ಚಟುವಟಿಕೆಗಳಲ್ಲಿ ತೊಡಗಲು ಆಗುವುದಿಲ್ಲ,’ ಎಂದು ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.