ಪುತ್ರನ ಕೊಂದವರ ಬಿಡಬೇಡಿ: ಹುತಾತ್ಮ ಯೋಧನ ತಂದೆ ಆಗ್ರಹ
Team Udayavani, Jun 17, 2018, 6:00 AM IST
ಶ್ರೀನಗರ: “ನನ್ನ ಪುತ್ರನನ್ನು ಕೊಂದವರನ್ನು ನೀವು ಕೊಲ್ಲುತ್ತೀರಾ? ಅಥವಾ ನಾನೇ ಈ ಬಗ್ಗೆ ಮುಂದಾಗಬೇಕಾ?’ ಹೀಗೆಂದು ಹುತಾತ್ಮ ಯೋಧ ಔರಂಗಜೇಬ್‌ರ ತಂದೆ ಮೊಹಮ್ಮದ್ ಹನೀಫ್ ಪ್ರಶ್ನಿಸಿದ್ದಾರೆ. ಉಗ್ರರ ಮಟ್ಟ ಹಾಕಲು ಅವರು ಕೇಂದ್ರ ಸರ್ಕಾರಕ್ಕೆ 72 ಗಂಟೆಗಳ ಗಡುವನ್ನೂ ನೀಡಿದ್ದಾರೆ. ಇಷ್ಟು ಮಾತ್ರವಲ್ಲ “ಪುತ್ರ ದೇಶಕ್ಕಾಗಿ ಹುತಾತ್ಮನಾಗಿದ್ದಾನೆ. ಈ ಘಟನೆಯಿಂದ ಹೆತ್ತವರು ಯಾರು ಎದೆಗುಂದಬೇಕಾಗಿಲ್ಲ. ಮಕ್ಕಳು ಸೇನೆ ಸೇರಲು ಬಯಸುವುದಿದ್ದರೆ ಅದಕ್ಕೆ ಪ್ರೋತ್ಸಾಹ ನೀಡಿ’ ಎಂದು ಹೇಳಿದ್ದಾರೆ. ಇದೇ ವೇಳೆ ಹುತಾತ್ಮರಾಗಿರುವ ಯೋಧ ಔರಂಗಜೇಬ್ ಅವರ ಅಂತ್ಯಕ್ರಿಯೆ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ಈ ನಡುವೆ ಶನಿವಾರ ರಂಜಾನ್ ದಿನವಾಗಿದ್ದರೂ ಕಣಿವೆ ರಾಜ್ಯದಲ್ಲಿ ಅಲ್ಲ ಲ್ಲಿ ಹಿಂಸಾಚಾರ ನಡೆ ದಿದ್ದು, ಇದರಲ್ಲಿ ಒಬ್ಬ ಪ್ರತಿಭಟನಾಕಾರ ಮೃತನಾಗಿದ್ದಾನೆ. ರಜೌರಿ ಸಮೀಪದಲ್ಲಿರುವ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ದಾಳಿಗೆ ಒಬ್ಬ ಯೋಧ ಹುತಾತ್ಮನಾಗಿದ್ದಾನೆ. ಸೊಪೂರ್, ಕುಪ್ವಾರಾಗಳಲ್ಲಿನ ಹಿಂಸಾಚಾರದಿಂದ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ. ಇದರ ಹೊರತಾಗಿಯೂ ಜಮ್ಮು ಮತ್ತು ಕಾಶ್ಮೀರದ ಇತರ ಭಾಗಗಳಲ್ಲಿ ಸಾಂಪ್ರದಾಯಿಕ ಕ್ರಮಗಳಿಂದ ರಂಜಾನ್ ಆಚರಿಸಲಾಗಿದೆ. ವಾಘಾ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಸಾಂಪ್ರದಾಯಿಕವಾಗಿ ನಡೆಯುವ ಸಿಹಿ ವಿನಿಮಯ ಕಾರ್ಯಕ್ರಮವೂ ನಡೆದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.