Jammu – Kashmir: ಉಗ್ರರ ಜೊತೆ ನಂಟು: ವೈದ್ಯ, ಪೊಲೀಸ್ ಸೇರಿ ನಾಲ್ವರು ಸರ್ಕಾರಿ ನೌಕರರು ವಜಾ
Team Udayavani, Nov 22, 2023, 12:28 PM IST
ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ವೈದ್ಯರು ಮತ್ತು ಪೊಲೀಸ್ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತ ಬುಧವಾರ ವಜಾಗೊಳಿಸಿದೆ.
ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಇಂತಹ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರ ನೀಡುವ ಭಾರತದ ಸಂವಿಧಾನದ 311 ನೇ ವಿಧಿಯ (2) ನಿಬಂಧನೆಯ ಉಪ-ಕಲಂ (ಸಿ) ಅನುಸಾರವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ (ವೈದ್ಯಕೀಯ), ನಿಸಾರ್-ಉಲ್-ಹಸನ್, ಕಾನ್ಸ್‌ಟೇಬಲ್ (ಜಮ್ಮು ಮತ್ತು ಕಾಶ್ಮೀರ ಪೊಲೀಸ್) ಅಬ್ದುಲ್ ಮಜೀದ್ ಭಟ್, ಉನ್ನತ ಶಿಕ್ಷಣ ಇಲಾಖೆಯ ಲ್ಯಾಬೋರೇಟರಿ ಬೇರರ್ ಅಬ್ದುಲ್ ಸಲಾಂ ರಾಥರ್ ಮತ್ತು ಶಿಕ್ಷಣ ಇಲಾಖೆಯ ಶಿಕ್ಷಕ ಫಾರೂಕ್ ಅಹ್ಮದ್ ಮಿರ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಫಾರೂಕ್ ಅಹ್ಮದ್ ಮಿರ್ ಅವರನ್ನು 1994 ರಲ್ಲಿ ಶಿಕ್ಷಣ ಇಲಾಖೆಗೆ ನೇಮಿಸಲಾಯಿತು ಆ ಬಳಿಕ 2007 ರಲ್ಲಿ ಶಿಕ್ಷಕರಾಗಿ ಬಡ್ತಿ ಹೊಂದಿದ್ದರು.
ಅಧಿಕಾರಿಗಳ ಮಾಹಿತಿ ಪ್ರಕಾರ ಈ ನಾಲ್ವರು ಸರ್ಕಾರಿ ನೌಕರರು ಉಗ್ರಗಾಮಿ ಸಂಘಟನೆಗಳಿಗೆ ಹಣಕಾಸು ಸಂಗ್ರಹಿಸಿರುವುದಲ್ಲದೆ ಅವರ ಸಿದ್ಧಾಂತವನ್ನು ಪ್ರಚಾರ ಮಾಡಿದ್ದಾರೆಂದು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಭಯೋತ್ಪಾದಕರ ಜೊತೆ ಸಂಪರ್ಕ, ಭಯೋತ್ಪಾದಕ ಚಟುವಟಿಕೆ, ಉಗ್ರರಿಗೆ ಹಣಕಾಸಿನ ನೆರವು ಹೀಗೆ ಸಂವಿಧಾನದ 311 (2) (ಸಿ) ಅಡಿಯಲ್ಲಿ 50 ಕ್ಕೂ ಹೆಚ್ಚು ನೌಕರರನ್ನು ವಜಾಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Israel-Hamas War: 50 ಒತ್ತೆಯಾಳುಗಳ ಬಿಡುಗಡೆಗೆ 4 ದಿನ ಕದನ ವಿರಾಮ ಘೋಷಿಸಿದ ಇಸ್ರೇಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.