ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Team Udayavani, Nov 14, 2024, 2:47 PM IST
ಗ್ರೇಟರ್ ನೋಯ್ಡಾ: ವೈದ್ಯರ ಯಡವಟ್ಟಿನಿಂದ ಏಳು ವರ್ಷದ ಬಾಲಕನ ಎಡ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುವ ಬದಲು ಬಾಲಕನ ಬಲ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಮಂಗಳವಾರ(ನ.12) ರಂದು ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.
ಏನಿದು ಪ್ರಕರಣ:
ಏಳು ವರ್ಷದ ಬಾಲಕನ ಎಡ ಕಣ್ಣಿನಲ್ಲಿ ಆಗಾಗ ನೀರು ಬರುತ್ತಿರುವ ನಿಟ್ಟಿನಲ್ಲಿ ಬಾಲಕನ ಕಣ್ಣಿನ ಪರೀಕ್ಷೆ ನಡೆಸಲು ತಂದೆ ಗ್ರೇಟರ್ ನೋಯ್ಡಾದಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಕಣ್ಣಿನಲ್ಲಿ ಪ್ಲಾಸ್ಟಿಕ್ ತರಹದ ವಸ್ತುವಿದೆ ಅದನ್ನು ಆಪರೇಷನ್ ಮಾಡಿ ತೆಗೆಯಬೇಕು, ಆಪರೇಷನ್ ಗೆ 45,000 ಖರ್ಚಾಗಲಿದೆ ಎಂದು ಹೇಳಿದ್ದಾರೆ. ಅದರಂತೆ ಅದೇ ದಿನ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಒಂದು ದಿನದ ಬಳಿಕ ಬಾಲಕನ್ನು ಡಿಸ್ಚಾರ್ಜ್ ಮಾಡಿದ್ದಾರೆ ಮನೆಗೆ ಬಂದ ಬಾಲಕನ ಕಣ್ಣಿಗೆ ಹಾಕಿದ ಬ್ಯಾಂಡೇಜ್ ನೋಡಿ ತಾಯಿ ಗಾಬರಿಗೊಂಡಿದ್ದಾರೆ ಅಲ್ಲದೆ ಬಾಲಕನ ಎಡ ಕಣ್ಣಿನಲ್ಲಿ ಸಮಸ್ಯೆ ಇದ್ದದ್ದು ಆದರೆ ಶಸ್ತ್ರಚಿಕಿತ್ಸೆ ನಡೆಸಿದ್ದು ಬಲ ಕಣ್ಣಿಗೆ ಎಂದು ಆಘಾತಗೊಂಡಿದ್ದಾರೆ.
डॉक्टर साहब की बड़ी लापरवाही#ग्रेटर_नोएडा 7 साल के मासूम बच्चे से खिलवाड़ डॉक्टर की बड़ी लापरवाही आई सामने जिस आंख में मासूम बच्चे को थी दिक्कत उसका ऑपरेशन ना करके सही आंख का कर दिया ऑपरेशन परिवार वालों ने बच्चों को देखा तो हुआ खुलासा आनंद स्पेक्ट्रम हॉस्पिटल की घटना थाना बीटा 2 pic.twitter.com/gq5gohKVcG
— PRIYA RANA (@priyarana3101) November 14, 2024
ಕೂಡಲೇ ಬಾಲಕನನ್ನು ಕರೆದುಕೊಂಡು ಆಸ್ಪತ್ರೆಗೆ ತೆರಳಿ ವಿಚಾರಿಸಿದಾಗ ವೈದ್ಯರು, ಸಿಬ್ಬಂದಿ ಸೇರಿದಂತೆ ಯಾರೂ ಸೂಕ್ತ ಉತ್ತರ ನೀಡದೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕನ ಮನೆಯವರು ಗೌತಮ್ ಬುದ್ಧ ನಗರದ ಮುಖ್ಯ ವೈದ್ಯಾಧಿಕಾರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: Karkala: ಬೋಳದಲ್ಲಿ ಅಬಕಾರಿ ದಾಳಿ… ಅಕ್ರಮ ದಾಸ್ತಾನಿಸಿರಿದ್ದ ಮದ್ಯದ ಬಾಕ್ಸ್ ಗಳು ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.