ಖಾಸಗಿ ಆಸ್ಪತ್ರೆ ಒಪಿಡಿ ಇಂದಿಲ್ಲ
Team Udayavani, Jan 2, 2018, 7:30 AM IST
ಹೊಸದಿಲ್ಲಿ: ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಮಸೂದೆ ಜಾರಿಗೆ ತರುವುದನ್ನು ಖಂಡಿಸಿ ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ವೈದ್ಯರು ಮುಷ್ಕರ ಹೂಡಿದ್ದರು. ಈಗ, ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ವಜಾ ಮಾಡಿ, ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಜಾರಿಗೆ ತರುವ ಕೇಂದ್ರ ಸರಕಾರದ ಪ್ರಸ್ತಾವಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗಿದೆ. ಅದನ್ನು ಖಂಡಿಸಿ ಕರ್ನಾಟಕ ಸಹಿತ ದೇಶಾದ್ಯಂತ ಮಂಗಳವಾರ ಖಾಸಗಿ ಆಸ್ಪತ್ರೆಗಳು 12 ಗಂಟೆಗಳ ಕಾಲ ಬಂದ್ ನಡೆಸಲಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹೊರ ರೋಗಿಗಳ ವಿಭಾಗ (ಒಪಿಡಿ)ದ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಆದರೆ ತುರ್ತು ಸೇವೆ ಮತ್ತು ಇತರ ಗಂಭೀರ ಆರೋಗ್ಯ ಸೇವೆಗಳ ವಿಭಾಗಗಳು ಕಾರ್ಯನಿರ್ವಹಿಸಲಿವೆ.
ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಜಾರಿ ಮಾಡುವ ಬಗ್ಗೆ ಇರುವ ಮಸೂದೆ ಮಂಗಳವಾರ ಸಂಸತ್‌ನಲ್ಲಿ ಚರ್ಚೆಗೆ ಬರಲಿದೆ. ಅದಕ್ಕೆ ಪೂರಕವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಜೆ.ಪಿ. ನಡ್ಡಾ ಭಾರತೀಯ ವೈದ್ಯರ ಮಂಡಳಿ (ಐಎಂಎ) ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಆದರೆ ಸಂಸತ್‌ನಲ್ಲಿ ಮಸೂದೆಯ ಬಗ್ಗೆ ಚರ್ಚೆ ಶುರುವಾಗುವ ಹಿನ್ನೆಲೆಯಲ್ಲಿ ಮಾತುಕತೆಯಿಂದ ಹೆಚ್ಚಿನ ಪ್ರಗತಿ ಕಾಣಲಿಲ್ಲ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತಂದು, ಅಲ್ಲಿರುವ ಭ್ರಷ್ಟಾಚಾರ ಮತ್ತು ನಿಯಮಕ್ಕೆ ಒಳಪಡದ ಪದ್ಧತಿ ತಡೆಯುವುದೇ ಮಸೂದೆಯ ಉದ್ದೇಶ ಎಂದು ನಡ್ಡಾ ಹೇಳಿದ್ದಾರೆ. ಆದರೆ, ಕೇಂದ್ರ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಂಗಳವಾರ ಕರಾಳ ದಿನ ಎಂದು ಆಚರಿಸಲು ವೈದ್ಯರು ಮುಂದಾಗಿದ್ದಾರೆ.
ವಿರೋಧವೇಕೆ?
ಐಎಂಎ ಅಧ್ಯಕ್ಷ ಡಾ| ರವಿ ವಾಂಖೇಡ್ಕರ್ ಮಾತನಾಡಿ ಎಂಸಿಐ ಬದಲಾಗಿ ಹಾಲಿ ರೂಪದಲ್ಲಿ ಆಯೋಗ ಸ್ಥಾಪನೆಯಾದರೆ ಅಧಿಕಾರಶಾಹಿ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಪರಿಣತರಲ್ಲದವರ ಮಾತು ಕೇಳಬೇಕಾಗುತ್ತದೆ. ಜತೆಗೆ ಅದು ಬಡವರ ವಿರೋಧಿಯಾಗಲಿದೆ ಎಂದ್ದಾರೆ. ಬ್ರಿಡ್ಜ್ ಕೋರ್ಸ್ ಮೂಲಕ ಹೋಮಿಯೋಪತಿ ಮತ್ತು ಆಯುರ್ವೇದ ವೈದ್ಯರಿಗೂ ಅಲೋಪತಿ ಔಷಧ ನೀಡುವುದಕ್ಕೆ ಅನುಮತಿ ನೀಡುವ ಪ್ರಸ್ತಾವಕ್ಕೂ ವಿರೋಧವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.