Scissor: ಮಹಿಳೆಯ ಹೊಟ್ಟೆಯಲ್ಲೇ ಕತ್ತರಿ ಬಿಟ್ಟ ವೈದ್ಯ, ವಿಚಾರ ಗೊತ್ತಾಗಿದ್ದು 2 ವರ್ಷದ ಬಳಿಕ
Team Udayavani, Nov 30, 2024, 4:25 PM IST
ಭೋಪಾಲ್: ಗ್ವಾಲಿಯರ್ ನ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರೊಬ್ಬರ ಎಡವಟ್ಟಿನಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಮಹಿಳೆಯ ಹೊಟ್ಟೆಯಲ್ಲೇ ಕತ್ತರಿ ಬಿಟ್ಟಿರುವ ಪ್ರಸಂಗ ನಡೆದಿದ್ದು ಇದಾಗಿ ಬರೋಬ್ಬರಿ ಎರಡು ವರ್ಷಗಳ ಬಳಿಕ ಮಹಿಳೆಯ ಹೊಟ್ಟೆಯಲ್ಲಿ ಕತ್ತರಿ ಬಿಟ್ಟಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಮಲಾ ಎಂಬ ಮಹಿಳೆ ಎರಡು ವರ್ಷಗಳ ಹಿಂದೆ ಗ್ವಾಲಿಯರ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್ ಗೆ ಒಳಗಾಗಿದ್ದರು ಈ ವೇಳೆ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಮರೆತು ಮಹಿಳೆಯ ದೇಹದೊಳಗೆ ಕತ್ತರಿಯೊಂದನ್ನು ಬಿಟ್ಟಿದ್ದಾರೆ. ಆದರೆ ಈ ವಿಚಾರ ವೈದ್ಯರಿಗಾಗಲಿ ಅವರ ಸಹಾಯಕರಿಗಾಗಲಿ ಗೊತ್ತಾಗಿರಲಿಲ್ಲ ಇದಾಗಿ ಎರಡು ವರ್ಷಗಳ ಬಳಿಕ ಮಹಿಳೆಗೆ ಹೊಟ್ಟೆನೋವು ಕಾಣಿಸಿಕೊಂಡಿದೆ ಯಾವುದೇ ಮದ್ದು ತೆಗೆದುಕೊಂಡರು ಹೊಟ್ಟೆನೋವು ಕಡಿಮೆಯಾಗಲಿಲ್ಲ ಬಳಿಕ ಮಹಿಳೆ ಭಿಂಡ್ ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದಾರೆ ಈ ವೇಳೆ ಆಸ್ಪತ್ರೆಯ ವೈದ್ಯ ಸತೀಶ್ ಶರ್ಮಾ ಅವರು ಮಹಿಳೆಯ ಹೊಟ್ಟೆಯ ಸಿಟಿ ಸ್ಕ್ಯಾನ್ ಮಾಡಿದ್ದಾರೆ, ಸಿಟಿ ಸ್ಕ್ಯಾನ್ ವರದಿ ನೋಡಿ ವೈದ್ಯರು, ಮಹಿಳೆಯ ಕುಟುಂಬದವರು ಬೆಚ್ಚಿ ಬಿದ್ದಿದ್ದಾರೆ ಕಾರಣ ಮಹಿಳೆಯ ಹೊಟ್ಟೆಯೊಳಗೆ ಕತ್ತರಿ ಇರುವುದು.
ಇದರ ಬಗ್ಗೆ ಮಹಿಳೆಯ ಕುಟುಂಬದವರ ಬಳಿ ವೈದ್ಯರು ವಿಚಾರಣೆ ಮಾಡಿದ ವೇಳೆ ಎರಡು ವರ್ಷಗಳ ಹಿಂದೆ ಕಮಲಾ ಅವರಿಗೆ ಗ್ವಾಲಿಯರ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡಿದ ವೇಳೆ ವೈದ್ಯರು ಕತ್ತರಿಯನ್ನು ಹೊಟ್ಟೆಯಲ್ಲೇ ಬಿಟ್ಟಿರುವುದು ಬೆಳಕಿಗೆ ಬಂದಿದೆ.
ಸದ್ಯ ಮಹಿಳೆಯ ಹೊಟ್ಟೆಯಲ್ಲಿದ್ದ ಕತ್ತರಿಯನ್ನು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದು ಮಹಿಳೆ ಆರೋಗ್ಯವಾಗಿದ್ದಾರೆ, ಇನ್ನು ಶಸ್ತ್ರ ಚಿಕಿತ್ಸೆ ವೇಳೆ ನಿರ್ಲಕ್ಷ ವಹಿಸಿದ ವೈದ್ಯರ ವಿರುದ್ಧ ದೂರು ನೀಡುವುದಾಗಿ ಮಹಿಳೆ ಹಾಗೂ ಕುಟುಂಬ ಸದಸ್ಯರು ಮುಂದಾಗಿದ್ದಾರೆ.
ಇದನ್ನೂ ಓದಿ: Tamilnadu: ಫೆಂಗಲ್ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್, ರೆಡ್ ಅಲರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಡಿ.5 ರಂದು ಪ್ರಧಾನಿ ಸಮ್ಮುಖದಲ್ಲಿ ನೂತನ ಸರಕಾರ ಪ್ರಮಾಣ ವಚನ
PM Modi ವಯನಾಡ್ ಭೂಕುಸಿತ ಸಂತ್ರಸ್ತರ ವಿರುದ್ಧ ತಾರತಮ್ಯ ತೋರಿದ್ದಾರೆ: ರಾಹುಲ್
Tamilnadu: ಫೆಂಗಲ್ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್, ರೆಡ್ ಅಲರ್ಟ್
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.