ವೈದ್ಯರ ರಾಷ್ಟ್ರವ್ಯಾಪಿ ಮುಷ್ಕರ ಯಶಸ್ವಿ
ಒಪಿಡಿ ಇಲ್ಲದೇ ಸಾರ್ವಜನಿಕರ ಪರದಾಟ
Team Udayavani, Jun 18, 2019, 6:00 AM IST
ನವದೆಹಲಿ/ಬೆಂಗಳೂರು/ಬಾಗಲಕೋಟೆ: ಸಹೋದ್ಯೋಗಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿದ್ದ ವೈದ್ಯರಿಗೆ, ಸೋಮವಾರ ದೇಶಾದ್ಯಂತ ವೈದ್ಯ ಸಮೂಹವೇ ಸಾಥ್ ನೀಡಿತು. ಈ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಕರೆ ಕೊಟ್ಟಿದ್ದ ರಾಷ್ಟ್ರವ್ಯಾಪಿ ವೈದ್ಯ ಮುಷ್ಕರ ಕರ್ನಾಟಕವೂ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಯಶಸ್ವಿಯಾಯಿತು.
ಆದರೆ, ವೈದ್ಯರ ಮುಷ್ಕರದಿಂದಾಗಿ ಆರೋಗ್ಯ ಸೇವೆಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿ, ರೋಗಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಯಿತು. ಪಶ್ಚಿಮ ಬಂಗಾಳದಲ್ಲಂತೂ, ಕಳೆದೊಂದು ವಾರದಿಂದ ಮುಷ್ಕರ ನಡೆಯುತ್ತಿದ್ದ ಕಾರಣ, ರೋಗಿಗಳ ಸ್ಥಿತಿ ಹೇಳತೀರದಂತಾಗಿತ್ತು.
ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ: ಐಎಂಎ ಕರೆ ಕೊಟ್ಟಿದ್ದ ಮುಷ್ಕರಕ್ಕೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿವಿಧೆಡೆ ಸರ್ಕಾರಿ ಆಸ್ಪತ್ರೆಗಳನ್ನು ಸೇರಿದಂತೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಘಟಕದ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿತು.
ಮುಷ್ಕರದ ಹಿನ್ನೆಲೆ ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ರಜೆ ನೀಡದೇ ಸಾಂಕೇತಿಕವಾಗಿ ಪ್ರತಿಭಟಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಆದರೂ, ರಾಜ್ಯದ ಕೆಲವೆಡೆ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಘಟಕವನ್ನು ಬಂದ್ ಮಾಡಿ ವೈದ್ಯರು ಮುಷ್ಕರದಲ್ಲಿ ಭಾಗವಹಿಸಿದ್ದರು.
ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತವಾಗಿತ್ತು. ಇದರಿಂದ ರೋಗಿಗಳು ಚಿಕಿತ್ಸೆಗೆ ಪರದಾಡಿದರು. ಕೆಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಹಾಗೂ ತುರ್ತು ಸೇವಾ ಘಟಕಗಳಲ್ಲಿ ದಟ್ಟಣೆ ಹೆಚ್ಚು ಕಂಡು ಬಂದಿದ್ದು, ಸಕಾಲಕ್ಕೆ ಚಿಕಿತ್ಸೆ ಸಿಗದೇ ರೋಗಿಗಳು ಅವರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.
ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ನಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ದಟ್ಟಣೆ ಹೆಚ್ಚಿತ್ತು. ವೈದ್ಯರು ಎಂದಿನಂತೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿ ಮಧ್ಯಾಹ್ನ ಊಟದ ವೇಳೆಯಲ್ಲಿ ಪ್ರತಿಭಟನೆ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.