ಗಡಿ ಬಿಕ್ಕಟ್ಟು: ಸೇನಾ ಅಧಿಕಾರಿಗಳ ಭೇಟಿ

Team Udayavani, Aug 12, 2017, 6:05 AM IST

Doklam-standoff.jpg

ನವದೆಹಲಿ: ಯುದ್ಧದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾದ ಹಿರಿಯ ಸೇನಾ ಅಧಿಕಾರಿಗಳು ಶುಕ್ರವಾರ ನಾಥು ಲಾದಲ್ಲಿ ಭೇಟಿಯಾಗಿದ್ದಾರೆ. ಕಳೆದೆರಡು ದಿನಗಳ ವಿದ್ಯಮಾನ ಈಗಾಗಲೇ ಗಡಿಯಲ್ಲಿ ಕಳವಳ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ ಗಡಿಯಲ್ಲಿ ಭಾರತ ಶುಕ್ರವಾರ ಇನ್ನಷ್ಟು ಯೋಧರನ್ನು ನಿಯೋಜಿಸಿದೆ.

ಉಭಯ ದೇಶಗಳು ಈಗಾಗಲೇ 3,488 ಕಿ.ಮೀ. ದೂರದ ಗಡಿ ಪ್ರದೇಶದಲ್ಲಿ ಹದ್ದಿನ ಕಣ್ಣಿಟ್ಟಿದ್ದು, ಭದ್ರತೆಯನ್ನೂ ಹೆಚ್ಚಿಸಿಕೊಂಡಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡಗಳ ಗಡಿಯಲ್ಲಿ ಈಗಾಗಲೇ ಸೇನಾ ನಿಯೋಜನೆ ಮಾಡಿಕೊಳ್ಳಲಾಗಿದೆ. ಡೋಕ್ಲಾಂ ಹಾಗೂ ಪ್ಲಟೆಯುವಿನಲ್ಲಿ ಸಾವಿರಾರು ಸೈನಿಕರ ನಿಯೋಜನೆ ಆಗಿದ್ದು, ಉಭಯ ದೇಶಗಳು ತೊಡೆತಟ್ಟಿ ಯುದ್ಧದ ಮಾತುಗಳನ್ನಾಡಿಕೊಳ್ಳುತ್ತಿವೆ. ಚೀನಾದ ಅತಿರೇಕತನ ಭಾರತೀಯರನ್ನು ಸಿಡಿದೇಳುವಂತೆ ಮಾಡಿದೆ.

ಸೇನೆ ಸನ್ನದ್ಧ: ಇದರ ಬೆನ್ನಲ್ಲೇ, ರಕ್ಷಣಾ ಸಚಿವ ಅರುಣ್‌ ಜೇಟ್ಲಿ, “”ಶಸ್ತ್ರ ಸಜ್ಜಿತ ಸೇನಾಪಡೆ ಯಾವುದೇ ಕ್ಷಣದಲ್ಲಿ ಯಾವುದೇ ಸವಾಲುಗಳನ್ನೂ ಎದುರಿಸಲು ಸಿದ್ಧತೆ ಮಾಡಿಕೊಂಡಿದೆ” ಎಂದು ಪುನರುಚ್ಚರಿಸಿದ್ದಾರೆ.

ಡೋಕ್ಲಾಂನ ಪರಿಸ್ಥಿತಿ ಬಗ್ಗೆ ಲೋಕಸಭೆಗೆ ಮಾಹಿತಿ ನೀಡಿದ ಜೇಟ್ಲಿ, “”ಸೇನಾ ಸಾಮರ್ಥ್ಯದ ಬಗ್ಗೆ ಯಾವುದೇ ಅನುಮಾನಗಳನ್ನು ಇಟ್ಟುಕೊಳ್ಳಬೇಕಾಗಿಲ್ಲ. ಭಾರತದ ಬಳಿ ಸಾಕಷ್ಟು ಶಸ್ತ್ರಾಸ್ತ್ರಗಳಿವೆ. ಸೇನಾ ಪಡೆಯೂ ಸನ್ನದ್ಧವಾಗಿ ನಿಂತಿದೆ” ಎಂದಿದ್ದಾರೆ.

ಭೂತಾನ್‌ ಜತೆ ಸುಷ್ಮಾ ಮಾತುಕತೆ
ಗಡಿಯಲ್ಲಿ ಯುದ್ಧ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಶುಕ್ರವಾರ ಭೂತಾನ್‌ನ ವಿದೇಶಾಂಗ ಪ್ರತಿನಿಧಿ ಡಾಮೊcà ದಾರ್ಜಿ ಅವರನ್ನು ಭೇಟಿ ಮಾಡಿ, ದ್ವಿಪಕ್ಷೀಯ ಒಪ್ಪಂದಕ್ಕೆ ಸಂಬಂಧಿಸಿ ಕಾಠ್ಮಂಡುವಿನಲ್ಲಿ ಮಾತುಕತೆ ನಡೆಸಿದ್ದಾರೆ. ಬಂಗಾಳ ಕೊಲ್ಲಿ ಉಪಕ್ರಮ ಶಕ್ತಿ ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರ (ಬಿಮ್‌ಸ್ಟೆಕ್‌) ಒಕ್ಕೂಟ ರಾಷ್ಟ್ರಗಳ ಸಚಿವರುಗಳ ಶೃಂಗದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತುಕತೆ ನಡೆದಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ. ಆದರೆ ಸಭೆಯಲ್ಲಿ ಏನೆಲ್ಲಾ ಮಾತುಕತೆಗಳು ನಡೆದಿವೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಮೂಲಗಳ ಪ್ರಕಾರ ಸಿಕ್ಕಿಂ ವಿವಾದಕ್ಕೆ ಸಂಬಂಧಿಸಿ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

ಹಿಂದೂ ಮಹಾಸಾಗರ ಭದ್ರತೆಗೆ
ಭಾರತ-ಚೀನಾ ಕೈಜೋಡಿಸಬೇಕು
ಯುಲಿನ್‌:
ಇಷ್ಟೆಲ್ಲಾ ಬೆಳವಣಿಗೆಗಳ ನಡುವೆಯೂ ಚೀನಾ ನೌಕಾ ದಳ, ಹಿಂದೂ ಮಹಾಸಾಗರದ ಭದ್ರತಾ ನಿರ್ವಹಣೆಗೆ ಸಂಬಂಧಿಸಿದಂತೆ ಭಾರತದೊಂದಿಗೆ ಕೈಜೋಡಿಸಲು ಬಯಸಿದೆ. ಹಿಂಬದಿ ಬಾಗಿಲಲ್ಲಿ ಬಂದು ಭಾರತದ ಕದ ತಟ್ಟುತ್ತಿರುವುದು ಸಹಜವಾಗಿಯೇ ಕುತೂಹಲ ಕೆರಳಿಸುವಂತೆ ಮಾಡಿದೆ. ಹಿಂದೂ ಮಹಾಸಾಗರ ಅಂತಾರಾಷ್ಟ್ರೀಯ ಸಮುದಾಯಕ್ಕೆ ಸೇರಲ್ಪಡುವ ಪ್ರದೇಶವಾಗಿದೆ ಎಂದು ಹೇಳಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾದ ವಿಶೇಷ ಭದ್ರತಾ ದಳದ ಪ್ರಧಾನ ಕಚೇರಿ ಪ್ರಭಾರಿ ಮುಖ್ಯಸ್ಥ ಪ್ರಧಾನಿ ಕ್ಯಾಪ್ಟನ್‌ ಲಿಯಾಂಗ್‌ ಟಿಯಾಂಜುನ್‌, “”ಹಿಂದೂ ಮಹಾಸಾಗರದ ಭದ್ರತೆ ದೃಷ್ಟಿಯಿಂದ ಭಾರತ ಮತ್ತು ಚೀನಾಗಳ ಜಂಟಿ ಸೇವೆ ಬಹಳ ಮುಖ್ಯ. ಇದು ನನ್ನ ವೈಯಕ್ತಿಕವಾದ ಅಭಿಪ್ರಾಯ” ಎಂದು ಹೇಳಿದ್ದಾರೆ.

ಯಥಾಸ್ಥಿತಿ ಕಾಪಾಡಿ: ಡಾಮಿನಿಕ್‌
“ಭಾರತ-ಚೀನಾ ನಡುವಿನ ಡೋಕ್ಲಾಂ ಪ್ಲಟೆಯು ಗಡಿ ವಿವಾದದ ಬೆಳವಣಿಗೆಗಳನ್ನು ಬ್ರಿಟನ್‌ ಗಮನಿಸುತ್ತ ಬಂದಿದೆ. ಉಭಯ ರಾಷ್ಟ್ರಗಳು ಶಾಂತಿಯಿಂದ ವಿವಾದ ಬಗೆಹರಿಸಿಕೊಳ್ಳಬೇಕಿದೆ. ಇದಕ್ಕಾಗಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗುವುದು ಸೂಕ್ತ’ ಎಂದು ಬ್ರಿಟಿಷ್‌ ಡೆಪ್ಯುಟಿ ಹೈ ಕಮಿಷನರ್‌ ಡಾಮಿನಿಕ್‌ ಮೆಕ್‌ಅಲಿಸ್ಟರ್‌ ಹೇಳಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಭಯ ರಾಷ್ಟ್ರಗಳು ಈ ನಿಟ್ಟಿನಲ್ಲಿ ಯೋಚಿಸುವುದು ಒಳಿತು ಎಂದಿದ್ದಾರೆ.

ಚೀನಾ ಲೈಟ್‌ಗಳಿಗೆ ನಿಷೇಧ
ವೃಂದಾವನ ದೇಗುಲದಲ್ಲಿ ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಚೀನಾ ಉತ್ಪಾದನೆಯ ಯಾವುದೇ ವಸ್ತುಗಳನ್ನೂ ಬಳಸದೇ ಇರಲು ನಿರ್ಧರಿಸಲಾಗಿದೆ. ಬೆಳಕಿನ ಅಲಂಕಾರಗಳಿಗೆ ಬಳಸಲಾಗುತ್ತಿದ್ದ ಚೀನಾದ ಯಾವುದೇ ವಸ್ತುಗಳನ್ನೂ ಬಳಸಬಾರದು ಎಂದು ಮಥುರಾದ ಶ್ರೀಕೃಷ್ಣ ಜನ್ಮಸ್ಥಾನ ಸೇವಾ ಸಂಸ್ಥಾನದ ಕಾರ್ಯದರ್ಶಿ ಕಪಿಲ್‌ ಶರ್ಮ ತಿಳಿಸಿದ್ದಾರೆ. ಆಗಸ್ಟ್‌ 14ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದ್ದು, ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಈಗಾಗಲೇ ತಿಳಿಸಲಾಗಿದೆ ಎಂದಿ ಹೇಳಿದ್ದಾರೆ.

ಟಾಪ್ ನ್ಯೂಸ್

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.