ಐಎಎಫ್ ಗೆ ಸಿದ್ಧವಾಗಿದೆ ಸ್ವದೇಶಿ ಅಸ್ತ್ರ
ಡಿಆರ್ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹೇಳಿಕೆ
Team Udayavani, Sep 30, 2019, 5:44 AM IST
ಹೊಸದಿಲ್ಲಿ: ಹದಿನೈದು ವರ್ಷಗಳಿಂದ ಅಭಿವೃದ್ಧಿಗೊಳಿಸುತ್ತಿದ್ದ ಅತ್ಯಾಧುನಿಕ ಅಸ್ತ್ರ ಕ್ಷಿಪಣಿ ಸಿದ್ಧವಾಗಿದೆ. ಐಎಎಎಫ್ 200 ಕ್ಷಿಪಣಿ ಖರೀದಿ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನ ಕೇಂದ್ರ (ಡಿಆರ್ಡಿಒ) ಮುಖ್ಯಸ್ಥ ಡಾ| ಜಿ. ಸತೀಶ್ ರೆಡ್ಡಿ ತಿಳಿಸಿದ್ದಾರೆ. ಅವುಗಳನ್ನು ಸುಖೋಯ್ 30 ಎಂಕೆಐ ಯುದ್ಧ ವಿಮಾನಕ್ಕೆ ಅಳವಡಿಸಬಹುದಾಗಿದೆ.
ಈ ಕ್ಷಿಪಣಿಯು 110 ಕಿ.ಮೀ. ದೂರ ಸಾಗಬಹುದಾಗಿದ್ದು, ಇಂಥ ಸುಧಾರಿತ ಕ್ಷಿಪಣಿಯನ್ನು ಹೊಂದಿರುವ ಕೆಲವೇ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ. ಈವರೆಗೆ ಅಮೆರಿಕ, ರಷ್ಯಾ, ಫ್ರಾನ್ಸ್ ಮತ್ತು ಇಸ್ರೇಲ್ ಇದೇ ಮಾದರಿಯ ಅತ್ಯಾಧುನಿಕ ಕ್ಷಿಪಣಿಗಳನ್ನು ಅಭಿವೃದ್ಧಿಗೊಳಿಸುವ ಸಾಮರ್ಥ್ಯ ಹೊಂದಿದ್ದವು.
ಪ್ರತಿರೋಧವನ್ನು ತಡೆಯುವ ಸಾಮರ್ಥ್ಯವನ್ನೂ ಹೊಂದಿರುವ ಸೂಪರ್ಸಾನಿಕ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಈ ಅಸ್ತ್ರಕ್ಕಿದೆ. ಕೇವಲ 3.57 ಮೀಟರ್ ಉದ್ದದ ಈ ಅಸ್ತ್ರ 154 ಕಿಲೋ ತೂಕ ಹೊಂದಿದೆ. ಗಂಟೆಗೆ 5 ಸಾವಿರ ಕಿ.ಮೀ ವೇಗದಲ್ಲಿ ಇದು ಸಾಗಬಲ್ಲದು. ಈ ಒಂದು ಅಸ್ತ್ರಕ್ಕೆ 7-8 ಕೋಟಿ ರೂ. ವೆಚ್ಚವಾಗುತ್ತದೆ. ವಿದೇಶದಲ್ಲಿ ತಯಾರಾಗುವ ಇದೇ ಶ್ರೇಣಿಯ ಕ್ಷಿಪಣಿಗಳಿಗೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ವೆಚ್ಚದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.